ನಳಿನ್‍ಗೆ ತಡೆ ನಿಜವಾದ ಕಾರ್ಯಕರ್ತರಿಂದ ಅಲ್ಲ : ಜಗದೀಶ ಶೇಣವ

ಇತ್ತೀಚೆಗೆ ಬೆಳ್ಳಾರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರ ಕಾರನ್ನು ತಡೆದು ದಿಗ್ಬಂಧನ ಹಾಕುವ ಕೆಲಸ ಆಕಾಂಕ್ಷಿಗಳು, ಅತೃಪ್ತರಿಂದ ಆಗಿದೆಯೇ ಹೊರತು ಬಿಜೆಪಿಯ ನಿಜವಾದ ಕಾರ್ಯಕರ್ತರಿಂದ ಅಲ್ಲ ಎಂದು ದ.ಕ ಜಿಲ್ಲಾ ಬಿಜೆಪಿ ವಕ್ತಾರ ಜಗದೀಶ ಶೇಣವ ಹೇಳಿದ್ದಾರೆ.ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹತ್ಯೆಯಾದ ಪ್ರವೀಣ್ ನೆಟ್ಟಾರ್ ಮನೆಗೆ ತೆರಳುವಾಗ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಸೇರಿದಂತೆ ಇತರೆ ಶಾಸಕರಿದ್ದರೂ ಕೇವಲ ನಳಿನ್ ಕುಮಾರ್ ಅವರನ್ನೇ ಟಾರ್ಗೆಟ್ ಮಾಡಲಾಗಿದೆ. ಇದರ ಹಿಂದೆ ಷಡ್ಯಂತ್ರವಿದೆ ಎಂದರು.ಕಷ್ಟಕರ ಸ್ಥಿತಿಯಲ್ಲೂ ಸಂಘಟನೆ ಕಟ್ಟಲು ಶ್ರಮಿಸಿದವರು. ಇದು ಈಗಿನ ಯುವ ಕಾರ್ಯಕರ್ತರಿಗೆ ತಿಳಿದಿಲ್ಲ. ಅವರಿಗೆ ಈ ರೀತಿ ತಡೆ ಒಡ್ಡಿದ ರೀತಿ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ವಕ್ತಾರರಾದ ರವಿಶಂಕರ ಮಿಜಾರು, ರಾಧಾಕೃಷ್ಣ, ಜಿಲ್ಲಾ ಮಾಧ್ಯಮ ಪ್ರಮುಖ್ ಸಂದೇಶ್ ಶೆಟ್ಟಿ, ಸಂಯೋಜಕ ರಂದೀಪ್ ಕಾಂಚನ್ ಉಪಸ್ಥಿತರಿದ್ದರು.