ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : ಮಣಿಪಾಲ ಕೆ.ಎಂ.ಸಿ ಯಲ್ಲಿ ಜಿಲ್ಲಾ ಮಟ್ಟದ ಕಾರ್ಯಗಾರ
ಉಡುಪಿ : ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಹಾಗೂ ನೇತ್ರವಿಜ್ಞಾನ ವಿಭಾಗ ಕೆ.ಎಂ.ಸಿ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ಜಿಲ್ಲೆಯ ಆರೋಗ್ಯ ಮತ್ತು ಕ್ಷೇಮಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಮುದಾಯ ಆರೋಗ್ಯ ಅಧಿಕಾರಿಯಗಳಿಗೆ ಉಪಕೇಂದ್ರ ಮಟ್ಟದಲ್ಲಿ ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದ ಕುರಿತು ಜಿಲ್ಲಾ ಮಟ್ಟದ ಕಾರ್ಯಗಾರವು ಮೇ 26 ರಂದು ಮಣಿಪಾಲ ಕೆ.ಎಂ.ಸಿ. ಯ ಇಂಟರಾಕ್ಟ್ ಕೆ.ಎಮ್.ಸಿ ಲೆಕ್ಚರ್ ಹಾಲ್‌ನಲ್ಲಿ ನಡೆಯಿತು.
ಕಾರ್ಯಾಗಾರದಲ್ಲಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ, ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಡಾ. ಲತಾ ನಾಯಕ್, ಮಣಿಪಾಲ ಕಸ್ತೂರ್ಬಾ ಮೆಡಿಕಲ್ ಕಾಲೇಜ್‌ನ ಡೀನ್ ಡಾ. ಪದ್ಮರಾಜ್ ಹೆಗಡೆ, ಮಣಿಪಾಲ ಕೆ.ಎಂ.ಸಿ. ಯ ಮುಖ್ಯ ಅಧೀಕ್ಷಕ ಅವಿನಾಶ್ ಶೆಟ್ಟಿ, ಕೆ.ಎಂ.ಸಿ ಯ ಸಮುದಾಯ ಆರೋಗ್ಯ ವಿಭಾಗದ ಮುಖ್ಯಸ್ಥ ಡಾ. ಅಶ್ವಿನ್‌ಕುಮಾರ್, ನೇತ್ರತಜ್ಞ ಡಾ. ಯೋಗೀಶ್ ಕಾಮತ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.