ನೆಲ್ಯಾಡಿ: ಶಿಶಿಲ ಪೇಟೆಯಲ್ಲಿ “ಸ್ವಚ್ಛತಾ ಹಿ ಸೇವಾ” ; ಪ್ರತಿಜ್ಞಾವಿಧಿ ಬೋಧನೆ
ಕೊಕ್ಕಡ : ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಕಾಂಕ್ಷಿ ಯೋಜನೆಯಾದ “ಸ್ವಚ್ಛತಾ ಹಿ ಸೇವಾ” ಕಾರ್ಯಕ್ರಮದಡಿ ಶಿಶಿಲ ಪೇಟೆಯಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.
ಶಿಶಿಲ ಗ್ರಾ.ಪಂ. ಅಧ್ಯಕ್ಷ ಸುಧೀನ್ ಡಿ., ಉಪಾಧ್ಯಕ್ಷ ಯತೀಶ್ ಯಳಚಿತ್ತಾಯ, ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗದವರು,
ಸಂಜೀವಿನಿ ಒಕ್ಕೂಟದ ಸದಸ್ಯರು, ಪಂಚಾಯತ್ ಆಟೋ ಚಾಲಕ ವೃಂದ, ಶೌರ್ಯ ವಿಪತ್ತು ನಿರ್ವಹಣಾ ತಂಡ, ಅಂಗಡಿ ಮಾಲಕರು, ಹಾಗೂ ಸ್ಥಳೀಯ ನಿವಾಸಿಗಳು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.
ಶಿಕ್ಷಕಿ ಸುಗುಣ ಕುಮಾರಿ ಪ್ರತಿಜ್ಞಾವಿಧಿ ಬೋಧಿಸಿದರು.