ನೆಲ್ಯಾಡಿ: ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು-ಮಂಗಳೂರು ಮಧ್ಯೆ ಉದನೆ ಸಮೀಪ ಗಣಪತಿ ಕಟ್ಟೆಯ ಬಳಿ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಇನೋವಾ ಕಾರು ರಸ್ತೆಯ ಮಧ್ಯದ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕಾರಿನಲ್ಲಿ ಮೂರು ಮಂದಿ ಪ್ರಯಾಣಿಸುತ್ತಿದ್ದು ಇವರ ಪೈಕಿ ವಾಸನಿ ಹಾಗೂ ಅವರ ಪತ್ನಿ ವೀಣಾ ಗಾಯಗೊಂಡು ಅವರನ್ನು ಶಿರಾಡಿ 108 ಆಂಬುಲೆನ್ಸ್ ನಲ್ಲಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.