ನೆಲ್ಯಾಡಿ: ಬಸ್ ಪಲ್ಟಿ – 15 ಮಂದಿಗೆ ಗಂಭೀರ ಗಾಯ

ನೆಲ್ಯಾಡಿ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೊರಮೇರು ಎಂಬಲ್ಲಿ ಮಂಡ್ಯದಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾದ ಘಟನೆ ಡಿ.19 ರಂದು ಬೆಳಗ್ಗೆ 3:30ರ ವೇಳೆಗೆ ನಡೆದಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಏಳು ಜನರನ್ನು ಮಂಗಳೂರಿನ ಐಲ್ಯಾಂಡ್ ಆಸ್ಪತ್ರೆಗೆ ಹಾಗೂ ಎಂಟು ಜನರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೂರಠಾಣೆಯ ಹೆಡ್ ಕಾನ್ಸ್ಟೇಬಲ್ ಬಾಲಕೃಷ್ಣ, ಪೋಲಿಸ್ ಸಿಬ್ಬಂದಿ ಪ್ರತಾಪ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ