ನೆಲ್ಯಾಡಿ: ಡೀಸೆಲ್ ಟ್ಯಾಂಕರ್ ಪಲ್ಟಿ, ಮುಗಿಬಿದ್ದ ಜನ
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಅಡ್ಡಹೊಳೆ ಎಂಬಲ್ಲಿ ಡೀಸಿಲ್ ಟ್ಯಾಂಕರ್ ರಸ್ತೆಯಲ್ಲಿ ಪಲ್ಟಿ ಹೊಡೆದು ಡೀಸೆಲ್ ಸೋರಿಕೆಯಾದ ಘಟನೆ ಸಂಭವಿಸಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಡೀಸೆಲ್ ಸಾಗಿಸುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿ ಹೊಡೆದ ಪರಿಣಾಮ ಟ್ಯಾಂಕರ್ ನಿಂದ ಡೀಸೆಲ್ ಸೋರಿಕೆಗೊಂಡ ಪರಿಣಾಮ ಡೀಸೆಲ್ ಸಂಗ್ರಹಣೆಗಾಗಿ ಮುಗಿಬಿದ್ದ ಜನರು.
ಮಾಹಿತಿ ಪಡೆದ ನೆಲ್ಯಾಡಿ ಹೊರಠಾಣೆಯ ಹೆಡ್‍ಕಾನ್‍ಸ್ಟೇಬಲ್ ಕುಶಾಲಪ್ಪ ನಾಯ್ಕ, ಪೊಲೀಸರಾದ ನಾಗರಾಜ್, ಹೈವೇ ಪೆಟ್ರೋಲ್ ನ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.