ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವೈದ್ಯಕೀಯ ನೆರವು
ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಕಡಬ ತಾಲೂಕು ನೆಲ್ಯಾಡಿ ವಲಯ, ಮಾದೇರಿ ಒಕ್ಕೂಟದ, ನೇತ್ರ ಶ್ರೀ ತಂಡದ ಸದಸ್ಯರಾದ ಶ್ರೀ ಲತಾರವರಿಗೆ ಅನಾರೋಗ್ಯ ನಿಮಿತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 25000/- ರೂಪಾಯಿ ಸಹಾಯಧನದ ಮಂಜೂರಾತಿ ಪತ್ರವನ್ನು, ಒಕ್ಕೂಟದ ತ್ರೈಮಾಸಿಕ ಸಭೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ ಸೆಬಾಸ್ಟಿನ್ ಪಿ.ಜೆ ರವರು ಶ್ರೀಲತಾರವರ ಪರವಾಗಿ ಅವರ ಪತಿಗೆ ವಿತರಿಸಿದರು. ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ವಿಜೇಶ್ ಜೈನ್, ಸೇವಾಪ್ರತಿನಿಧಿ ಕವಿತಾ, ಒಕ್ಕೂಟದ ಪದಾಧಿಕಾರಿಗಳು, ಸಂಘದ ಸದಸ್ಯರು ಉಪಸ್ಥಿತರಿದ್ದರು