ಫೆ.21ರಂದು ‘ನೀನೊಲಿದ ಬದುಕು’ ಕೃತಿ ಲೋಕಾರ್ಪಣೆ

ಕಲ್ಕೂರ ಪ್ರತಿಷ್ಠಾನ ಮಂಗಳೂರು, ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಮತ್ತು ಸ್ನಾತಕೋತ್ತ ತುಳು ಅಧ್ಯಯನ ವಿಭಾಗ, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ನಿವೃತ್ತ ಹಿರಿಯ ಐಎಎಸ್ ಅಧಿಕಾರಿ, ಸಾಹಿತಿ ಡಾ. ಸಿ. ಸೋಮಶೇಖರ್ ಅವರು ಬರೆದಿರುವ ಆತ್ಮಕಥನ ಕೃತಿ ನೀನೊಲಿದ ಬದುಕು ಅನಾವರಣ ಸಮಾರಂಭವು ಫೆ.21ರಂದು ನಡೆಯಲಿದೆ.
ಈ ಬಗ್ಗೆ ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…. ಎ. ಆರ್ ಸುಬ್ಬೆ ಕಟ್ಟಿ ಅವರು, ನಗರದ ವಿಶ್ವವಿದ್ಯಾಲಯದ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಕೃತಿ ಲೋಕಾರ್ಪಣೆ ಕಾರ್ಯಕ್ರಮ ಜರುಗಲಿದೆ. ಎಡನೀರು ಮಠಾಧೀಶರಾದ ಪರಮ ಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಸಾನಿಧ್ಯ ವಹಿಸಿ ಆಶೀರ್ವಛನ ನೀಡಲಿದ್ದು, ಹಿರಿಯ ಸಾಹಿತಿ ಮತ್ತು ವಿಶ್ರಾಂತ ಕುಲಪತಿ ಪ್ರೊ. ಬಿ.ಎ ವಿವೇಕ್ ರೈ ಅವರು ಕೃತಿ ಅನಾರವಣ ಮಾಡಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್‍ನ ಮಾಜಿ ರಾಜ್ಯಾಧ್ಯಕ್ಷರಾದ ಹರಿಕೃಷ್ಣ ಪುನರೂರು ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ರವಿಕುಮಾರ್, ಪೊಲೀಸ್ ಆಯುಕ್ತರಾದ ಶಶಿಕುಮಾರ್, ಜಿ.ಪಂ. ಸಿಇಒ ಡಾ. ಕುಮಾರ್ ಭಾಗವಹಿಸಲಿದ್ದಾರೆ ಎಂದರು.ಈ ಸಂದರ್ಭ ಸುದ್ದಿಗೋಷ್ಟಿಯಲ್ಲಿ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ, ಜಾನಪದ ಪರಿಷತ್ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಉಪಸ್ಥಿತರಿದ್ದರು.
