ಜಿಲ್ಲಾ ಮಟ್ಟದ ಕರಾಟೆ ಕ್ರೀಡಾಕೂಟ : ರಾಜ್ಯಮಟ್ಟಕ್ಕೆ ಆಯ್ಕೆ ಆದ ನೋಬಲ್ ಆಂಗ್ಲ ಮಾಧ್ಯಮ ಫ್ರೌಢಶಾಲೆಯ ವಿದ್ಯಾರ್ಥಿಗಳು
ದೇರಳಕಟ್ಟೆಯ ವಿದ್ಯಾರತ್ನ ವಿದ್ಯಾಸಂಸ್ಥೆಯಲ್ಲಿ ನಡೆದ ದಕ್ಷಿಣ ಕನ್ನಡ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಕರಾಟೆ ಕ್ರೀಡಾಕೂಟದಲ್ಲಿ ಕುಂಜತ್ತಬೈಲಿನ ನೋಬಲ್ ಆಂಗ್ಲ ಮಾಧ್ಯಮ ಫ್ರೌಢಶಾಲೆಯ ವಿದ್ಯಾರ್ಥಿಗಳಾದ ಹರ್ಷಿಕ, ವರ್ಷಿತ ಇವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಧನ್ವಿತ್ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರು ನಿತೀನ್ .ಎನ್ .ಸುವರ್ಣ, ಸಂಪತ್ ಹಾಗು ಸುಶಾಂತ್ ರವರಿಂದ ಕರಾಟೆ ತರಬೇತಿಯನ್ನು ಪಡೆಯುತ್ತಿದ್ದಾರೆ.