ದ.ಕ. ಜಿಲ್ಲೆಯಲ್ಲಿ ಒಕ್ಕಲಿಗ ಗೌಡ ಸಮುದಾಯಕ್ಕೆ 2 ಸ್ಥಾನ ನೀಡಬೇಕು : ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಮನವಿ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಕ್ಕಲಿಗ ಗೌಡ ಸಮುದಾಯಕ್ಕೆ ಎರಡು ಸ್ಥಾನವನ್ನು ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಮನವಿಯನ್ನು ಮಾಡಿದೆ.ಈ ಬಗ್ಗೆ ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಜಿಲ್ಲಾ ಅಧ್ಯಕ್ಷರಾದ ಲೋಕಯ್ಯ ಗೌಡ ಅವರು, ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಪುತ್ತೂರು, ಬೆಳ್ತಂಗಡಿ ಕ್ಷೇತ್ರಗಳಲ್ಲಿ ಪ್ರಾತಿನಿದ್ಯ ಕೊಡಬೇಕು. ಎರಡು ಕ್ಷೇತ್ರಗಳಲ್ಲಿ ಪ್ರಾತಿನಿದ್ಯ ನೀಡಲಾಗದಿದ್ದರೆ ಪುತ್ತೂರು ಒಂದು ಕ್ಷೇತ್ರದಲ್ಲಾದರೂ ನಮ್ಮ ಸಮಾಜದ ರಾಜಕೀಯ ವ್ಯಕ್ತಿಗಳಿಗೆ ಪ್ರಾತಿನಿದ್ಯ ನೀಡಲೇಬೇಕು ಎಂದು ಒತ್ತಾಯಿಸಿದರು.ಈ ಸಂದರ್ಭ ಸುದ್ದಿಗೋಷ್ಟಿಯಲ್ಲಿ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷರಾದ ಸದಾನಂದ ಗೌಡ ಡಿ, ಉಪಾಧ್ಯಕ್ಷರಾದ ಪದ್ಮನಾಭ ಗೌಡ ದೇವಸ್ಯ, ಕಾರ್ಯದರ್ಶಿ ಕೆ. ರಾಮಣ್ಣ ಗೌಡ, ನಿರ್ದೇಶಕರಾದ ಗುರುದೇವ್ ಯು.ಬಿ. ಉಪಸ್ಥಿತರಿದ್ದರು.
