ಪಡುಬಿದ್ರಿ: ಬೃಹತ್ತಾಕಾರದ ಮರ ಬಿದ್ದು ಕಾರ್ಮಿಕ ಸಾವು, ಇಬ್ಬರಿಗೆ ಗಾಯ
ನಾಗಬನ ಮತ್ತು ಮನೆಯ ಮೇಲೆ ಅಪಾಯಕಾರಿಯಾಗಿ ವಾಲಿದ್ದ ಮರವನ್ನು ಕಡಿಯುತ್ತಿದ್ದ ವೇಳೆ ಮರ ಉರುಳಿ ಬಿದ್ದು ಜಾರ್ಖಂಡ್ ಮೂಲದ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಮಜೂರು ಗ್ರಾಮದ ಕರಂದಾಡಿಯಲ್ಲಿ ನಡೆದಿದೆ.
ಬಿಹಾರ -ಜಾರ್ಖಂಡ್ ಮೂಲದ ಸುಧೀರ್ ಪಾಂಜೆ ಮೃತ ಕೂಲಿ ಕಾರ್ಮಿಕ ಎಂದು ಗುರುತಿಸಲಾಗಿದೆ. ಕರಂದಾಡಿ ದೇವಸ್ಥಾನದ ಬಳಿ ಬೃಹತ್ ಗೋಳಿ ಮರವನ್ನು ಕಡಿಯುತ್ತಿದ್ದ ವೇಳೆ ಅದು ಕಾರ್ಮಿಕರ ಮೇಲೆ ಉರುಳಿ ಬಿದ್ದಿತ್ತು. ಇದರಿಂದಾಗಿ ಮೂವರು ಕಾರ್ಮಿಕರು ಮರದಡಿಗೆ ಸಿಲುಕಿಕೊಂಡಿದ್ದು, ಓರ್ವ ಮರದಡಿ ಸಿಲುಕಿ ಮೃತಪಟ್ಟಿರೆ ಉಳಿದಿಬ್ಬರನ್ನು ರಕ್ಷಿಸಿ ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.