ಪಡುಬಿದ್ರಿ: ಆದ್ಯಾ ಫೌಂಡೇಷನ್ ವತಿಯಿಂದ ಉದ್ಯೋಗ ಮೇಳ

ನಿರಂತರ ಸಮಜೋಮುಖಿ ಕಾರ್ಯಗಳನ್ನೇ ತನ್ನ ಉಸಿರಾಗಿಸಿಕೊಂಡ ಪಡುಬಿದ್ರಿಯ ಆದ್ಯಾ ಫೌಂಡೇಷನ್ ವತಿಯಿಂದ ಎರಡು ದಿನಗಳ ಬೃಹತ್ ಉದ್ಯೋಗ ಮೇಳ ಪಡುಬಿದ್ರಿ ಪಾದೆಬೆಟ್ಟು ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಈ ಉದ್ಯೋಗ ಮೇಳದ ಉದ್ಘಾಟನೆಯನ್ನು ಸರಳ ಸಭಾ ಕಾರ್ಯಕ್ರಮದಲ್ಲಿ ಸ್ಥಳೀಯ ಪಾದೆಬೆಟ್ಟು ಸುಬ್ರಹ್ಮಣ್ಯ ದೇವಸ್ಥಾನ ಮುಕ್ತೇಸರರಾದ ಜೀತೇಂದ್ರ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು.

ವಿವಿಧ ಉದ್ಯೋಗ ಆಕಾಂಕ್ಷೀ ಗಳಿಗಾಗಿ ರಾಕೇಶ್ ಅಜಿಲ ಸಾರಥ್ಯದ ಆದ್ಯಾ ಫೌಂಡೇಷನ್ ಆಯೋಜಿಸಿದ ಉದ್ಯೋಗ ಮೇಳದಲ್ಲಿ 2200ಕ್ಕೂ ಅಧಿಕ ಉದ್ಯೋಗ ಅವಕಾಶಗಳಿದ್ದು, ಈ ಮೇಳದಲ್ಲಿ 500ರಕ್ಕೂ ಅಧಿಕ ಉದ್ಯೋಗ ಆಕಾಂಕ್ಷಿಗಳು ಪಾಲ್ಗೊಂಡಿದ್ದರು. ಈ ಸಂದರ್ಭ ಮಾಧ್ಯಮಕ್ಕೆ ಮಾಹಿತಿ ನೀಡಿದ ಮಾತೃ ಸಂಸ್ಥೆಯ ಮುಖ್ಯಸ್ಥ ರಾಕೇಶ್ ಅಜಿಲ, ಪದವಿ ಮುಗಿಸಿ ಉದ್ಯೋಗಕ್ಕಾಗಿ ಅಲೆದಾಡುತ್ತಿರುವ ಯುವಕ- ಯುವತಿಯರ ದಂಡು ನಮ್ಮ ಭಾಗದಲ್ಲಿ ಬಹಳಷ್ಟು ದೊಡ್ಡದಿದೆ, ಅವರಿಗೆ ಉದ್ಯೋಗ ಕಲ್ಪಿಸಿದರೆ ಅದೆಷ್ಟೋ ಕುಟುಂಬಗಳು ಏಳಿಗೆಯನ್ನು ಕಾಣಲು ಸಾಧ್ಯವಿದ್ದು, ಆ ನಿಟ್ಟಿನಲ್ಲಿ ಸಮಾಜ ಸೇವೆಗಾಗಿಯೇ ಹುಟ್ಟಿಕೊಂಡ ನಮ್ಮ ಈ ಆದ್ಯಾ ಫೌಂಡೇಷನ್ ನಮ್ಮ ಕರ್ತವ್ಯ ಪಾಲಿಸುತ್ತಿದ್ದು, ಮುಂದಿನ ದಿನದಲ್ಲಿ ಮತ್ತಷ್ಟು ಸಮಜೋಮುಖಿ ಕಾರ್ಯ ನಡೆಸುವ ಹಂಬಲ ನಮ್ಮದು ಬೆಂಬಲ ಸಮಾಜ ನೀಡ ಬೇಕಾಷ್ಟೆ ಎಂದರು.

ಈ ಸಂದರ್ಭ ಸ್ಥಳೀಯ ಪ್ರಮುಖರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಅಶೋಕ ಪೂಜಾರಿ, ಗೀತಾ ಪ್ರಭಾಕರ್, ಶೋಭಾ ಜೆ. ಶೆಟ್ಟಿ, ಸಂದೇಶ್ ಶೆಟ್ಟಿ, ಮಕರಂದ್ ಸಾಲ್ಯಾನ್, ಪತ್ರಕರ್ತ ಸುರೇಶ್ ಎರ್ಮಾಳ್, ನಾಗರಾಜ್ ವರ್ಕಾಡಿ ಹಾಗೂ ಸಂಘಟಕ ರಾಕೇಶ್ ಸಜಿಲ ಉಪಸ್ಥಿತರಿದ್ದರು.

Related Posts

Leave a Reply

Your email address will not be published.