*ಪಡುಬಿದ್ರಿ: ಪ್ರೀತಿ, ವಿಶ್ವಾಸದಿಂದ ವಿಶೇಷ ಮಕ್ಕಳ ಮನಸ್ಸು ಗೆಲ್ಲಬಹುದು: ಮಾಜಿ ಸಚಿವ ವಿನಯಕುಮಾರ್ ಸೊರಕೆ
ಸಮಾಜದಲ್ಲಿ ಸಾಮಾನ್ಯರಂತೆ ಬದುಕು ಸಾಗಿಸಲು ಅಸಾಧ್ಯವಾದ ವಿಶೇಷ ಮಕ್ಕಳ ಮನಸ್ಸನ್ನು ಪ್ರೀತಿ ವಿಶ್ವಾಸದಿಂದ ಗೆಲ್ಲಲು ಸಾಧ್ಯ ಎಂಬುದಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಅವರು ಶಿರ್ವ ಪಾಂಬೂರಿನ ಮಾನಸ ವಿಶೇಷ ಮಕ್ಕಳ ಶಾಲೆಯಲ್ಲಿ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಕಾಪು ಬ್ಲಾಕ್ ಕಾಂಗ್ರೆಸ್ ಆಯೋಜಿಸಿದ ಸೊರಕೆಯವರ 69ನೇ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಕೇಕ್ ಕತ್ತರಿಸಿ ಪುಟಾಣಿಗಳಿಗೆ ತಿನ್ನಿಸಿ ಮಾತನಾಡಿದರು.
ಇದೇ ಸಂದರ್ಭ ವಿಶೇಷ ಮಕ್ಕಳಿಗಾಗಿ ಆಯೋಜಿಸಿದ ಆಟೋಟ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ವೇದಿಕೆಯಲ್ಲಿ ಮಾನಸ ಸಂಸ್ಥೆಯ ಪ್ರಮುಖರು, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಶಿವಾಜಿ ಸುವರ್ಣ ಶಿರ್ವ, ಅಶೋಕ್ ಕೊಡವೂರು ಮುಂತಾದವರಿದ್ದರು.