ಸುಳ್ಯ ಸಮರ – 1837 ಸಂಸ್ಮರಣಾ ಮತ್ತು ವಿಜಯದಿನಾಚರಣೆ ಕಾರ್ಯಕ್ರಮ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ

ಮಂಗಳೂರು : ಸಮರ ವೀರ ಕೆದಂಬಾಡಿ ರಾಮಯ್ಯ ಗೌಡ್ರ ಮುಂದಾಳತ್ವದಲ್ಲಿ ನಡೆದ ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗೆದ್ದು ಮಂಗಳೂರಿನ ಬಾವುಟ ಗುಡ್ಡೆಯಲ್ಲಿ ವಿಜಯ ದ್ವಜ ಹಾರಿಸಿ ಮತ್ತು 13 ದಿವಸ ಆಡಳಿತ ನಡೆಸಿದ ಸಂಸ್ಮರಣಾ ದಿನ ಆಚರಣೆಯ ಅಂಗವಾಗಿ ತುಳುನಾಡ ಅಮರ ಸುಳ್ಯ ಸಮರ – 1837 ಸಂಸ್ಮರಣಾ ಮತ್ತು ವಿಜಯದಿನಾಚರಣೆ ಕಾರ್ಯಕ್ರಮ ಪ್ರಯುಕ್ತ ಸಮರ ವೀರ ಕೆದಂಬಾಡಿ ರಾಮಯ್ಯ ಗೌಡ ಸ್ಥಾಪನ ಸಮಿತಿ ಮಂಗಳೂರು ವತಿಯಿಂದ ಚಿತ್ರಕಲಾ ಸ್ಪರ್ಧೆ ಏ.5 ರಂದು ಬೆಳಗ್ಗೆ 9 ಗಂಟೆಗೆ ಮಂಗಳೂರು ಬಾವುಟಗುಡ್ಡೆಯಲ್ಲಿ ನಡೆಯಲಿದೆ.

1 ರಿಂದ 4ನೇ ತರಗತಿಯವರಿಗೆ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಬಳಿ ರಾಷ್ಟ್ರ ಧ್ವಜಸ್ತಂಭ- ಹೀಗಿದ್ದರೆ ಚಂದ, 5 ರಿಂದ 7 ನೇ ತರಗತಿಯವರಿಗೆ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಉದ್ಯಾನವನ –ಹೀಗಿದ್ದರೆ ಚಂದ, 8 ರಿಂದ 10 ನೇ ತರಗತಿಯವರಿಗೆ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ರಸ್ತೆ- ಹೀಗಿದ್ದರೆ ಚಂದ, ಸಾರ್ವಜನಿಕರಿಗೆ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಯುದ್ದ ಸ್ಮಾರಕ – ಹೀಗಿದ್ದರೆ ಚಂದ ಎಂಬ ವಿಷಯಗಳ ಬಗ್ಗೆ ಚಿತ್ರ ಬಿಡಿಸುವ ಸ್ಪರ್ಧೆ ನಡೆಯಲಿದ್ದು, 90 ನಿಮಿಷಗಳ ಕಾಲಾವಕಾಶವನ್ನು ನೀಡಲಾಗುವುದು.ಎ. 2 ರ ಒಳಗಾಗಿ 9448254396, 9449231665,9480594101 ಗೆ ನೋಂದಣಿ ಮಾಡಬೇಕಾಗಿ ತಿಳಿಸಿದ್ದಾರೆ.

Related Posts

Leave a Reply

Your email address will not be published.