ಪಲಿಮಾರು : ಮೇ 18ರಂದು ಯುವ ವಿಪ್ರ ಸಮಾವೇಶ

ಶ್ರೀ ಪಲಿಮಾರು ಮೂಲ ಮಠದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿಯ 18 – 40ರ ವಯೋಮಿತಿಯ ತ್ರಮತಸ್ಥ ಬ್ರಾಹ್ಮಣ ಯುವಕರ ಸಮಾವೇಶ ವಿಹಿತಮ್ ಮೇ 18 ಶನಿವಾರದಂದು ನಡೆಯಲಿದೆ ಎಂದು ಪಲಿಮಾರು ಮಠಾಧೀಶ ಶ್ರೀವಿದ್ಯಾದೀಶ ತೀರ್ಥರು ಹೇಳಿದ್ದಾರೆ.

ಪಲಿಮಾರು ಮಠದಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾತಃ ಸ್ಮರಣೀಯರಾದ ಶ್ರೀ ವಿದ್ಯಾಮಾನ್ಯತೀರ್ಥ ಶ್ರೀಪಾದರ ಆರಾಧನೋತ್ಸವದ ಸಂದರ್ಭದಲ್ಲಿ ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು, ಈ ಸಂದರ್ಭದಲ್ಲಿ, ಅಯೋಧ್ಯೆಯಲ್ಲಿ ಶ್ರೀರಾಮದೇವರ ಪ್ರಾಣ ಪ್ರತಿಷ್ಠಾ ಮಹೋತ್ಸವ ಮತ್ತು ೪೮ ದಿನಗಳ ಮಂಡಲೋತ್ಸವವನ್ನು ಯಶಸ್ವಿಯಾಗಿ ಪೊರೈಸಿದ ಶ್ರೀ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಅಭುನಂದನಸಮಾರಂಭವೂ ನಡೆಯಲಿದೆ.

ಇದರಲ್ಲಿ ಶ್ರೀ ಕಾಣಿಯೂರು ಮಠದ ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥರು , ಶ್ರೀ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥರು ಶ್ರೀ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ, ಶ್ರೀ ಭೀಮನಕಟ್ಡೆ ಮಠದ ಶ್ರೀ ರಘುವರೇಂದ್ರ ತೀರ್ಥರು , ಶ್ರೀ ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ತೀರ್ಥರು , ಶ್ರೀ ಶ್ರೀರೂರು ಮಠದ ಶ್ರೀ ವೇದವರ್ಧನ ತೀರ್ಥರು ಭಾಗವಹಿಸಿ ಮಾರ್ಗದರ್ಶನಗೈಯಲಿರುವರು

ಸುದ್ದಿಗೋಷ್ಠಿಯಲ್ಲಿ ಶ್ರೀ ವಿದ್ಯಾರಾಜೇಶ್ವರವತೀರ್ಥ, ವಿಷ್ಣು ಆಚಾರ್ಯ, ವಾಸುದೇವ ರಾವ್, ಪ್ರಣವ್ ಆಚಾರ್ಯ,ರಾಹುಲ್ ಬಾರಿತ್ತಾಯ, ಶಶಾಂಕ್ ಶಿವತ್ತಾಯ,ರೋಹನ್ ಬಾರಿತ್ತಾಯ ಉಪಸ್ಥಿತರಿದ್ದರು.

Related Posts

Leave a Reply

Your email address will not be published.