ಫೆ. 22-25,ಪಣಿಯೂರು ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನ-ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮತ್ತು ಸಿರಿ ಸಿಂಗಾರದ ನೇಮ

ಸುಮಾರು ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಪಣಿಯೂರು ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ವೇ| ಮೂ| ಬೆಟ್ಟಿಗೆ ವೆಂಕಟರಾಜ ತಂತ್ರಿಗಳ ನೇತೃತ್ವದಲ್ಲಿ ಫೆ. ೨೨ರಿಂದ ಮೊದಲ್ಗೊಂಡು ಫೆ. ೨೫ರವರೆಗೆ ಶ್ರೀ ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮತ್ತು ಸಿರಿ ಸಿಂಗಾರದ ನೇಮ ಜರಗಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹೇಳಿದ್ದಾರೆ. ಶ್ರೀಕ್ಷೇತ್ರದಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು. ಫೆ. ೨೨ರಂದು ಸಂಜೆ ೩ ಗಂಟೆಗೆ ಕುಂಜೂರು ದುರ್ಗಾ ನಗರ ದೇವರ ಕಟ್ಟೆಯಿಂದ ಬಬ್ಬುಸ್ವಾಮಿ ದೈವಸ್ಥಾನದವರೆಗೆ ಬೃಹತ್ ಹೊರೆಕಾಣಿಕೆ ಮೆರವಣಿಗೆ ಮತ್ತು ನಗನಾಣ್ಯಗಳೊಂದಿಗೆ ವೈಭವದ ಮೆರವಣಿಗೆ ನಡೆಯಲಿದೆ. ಸಂಜೆ ೫ ಗಂಟೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಫೆ. ೨೩ರಂದು ಬೆಳಗ್ಗೆ 7 ಗಂಟೆಯಿಂದ ಪುಣ್ಯಾಹ ವಾಚನ, ಗಣಯಾಗ, ನವಗ್ರಹಯಾಗ, ಪ್ರಧಾನ ದೈವಗಳ ಪ್ರತಿಷ್ಠೆ, ಪಂಚಾಮೃತ ಅಭಿಷೆಕ, ಬ್ರಹ್ಮಕಲಶಾಭಿಶೇಕ, ಪ್ರಸನ್ನ ಪೂಜೆ, ದೈವದರ್ಶನ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 5 ಗಂಟೆಗೆ ಸಭಾಕಾರ್ಯಕ್ರಮ, 7 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮದ ಪ್ರಯುಕ್ತ ಕಲಾಕುಂಭ ಸಾಂಸ್ಕೃತಿಕ ವೇದಿಕೆ ಕುಳಾಯಿ ಇವರಿಂದ ತುಳುನಾಡ ಸಂಸ್ಕೃತಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ ಕೇಮಾರು ಸಾಂದೀಪನಿ ಸಾಧನಾಶ್ರಮದ ಯತಿಗಳಾದ ಶ್ರೀ ಈಶವಿಠಲದಾಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಡಾ| ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಭಾ ಕಾರ್ಯಕ್ರಮವನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದು, ಎಂ.ಆರ್.ಜಿ ಗ್ರೂಫ್‌ನ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಅವರು ಆಶಾ ಪ್ರಕಾಶ್ ಶೆಟ್ಟಿ ಸ್ವಾಗತ ಗೋಪುರವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ರ್ಪಧಾನ ಭಾಷಣ ಮಾಡಲಿದ್ದಾರೆ. ಸಚಿವ ಎಸ್. ಅಂಗಾರ, ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯೆ ಭಾರತಿ ಸತೀಶ್ ಶೆಟ್ಟಿ, ಅದಾನಿ ಸಮೂಹದ ಅಧ್ಯಕ್ಷ ಕಿಶೋರ್ ಆಳ್ವ, ಗಣ್ಯರಾದ ಸದಾನಂದ ಶೆಟ್ಟಿ ಪುಣೆ, ಕೃಷ್ಣ ವೈ. ಶೆಟ್ಟಿ, ಯಶ್‌ಪಾಲ್ ಸುವರ್ಣ, ಸುರೇಶ್ ಪಿ. ಶೆಟ್ಟಿ ಗುರ್ಮೆ, ಪ್ರವೀಣ್ ಭೋಜ ಶೆಟ್ಟಿ, ನಡಿಮನೆ ದೇವರಾಜ ರಾವ್, ಮೋಹನ್ ಶೆಟ್ಟಿ ಬೆಳಪುಗುತ್ತು, ಬಿ.ಎಸ್. ಚೆನ್ನಪ್ಪ ಮೂಲ್ಕಿ, ಶೋಭಾ ಭಟ್, ಹರೀಶ್ಚಂದ್ರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ತಂತ್ರಿಗಳಾದ ವೇ| ಮೂ| ಬೆಟ್ಟಿಗೆ ವೆಂಕಟರಾಜ ತಂತ್ರಿ, ಗುತ್ತಿನಾರ್ ಯೋಗೀಶ್ ಶೆಟ್ಟಿ ಪಣಿಯೂರುಗುತ್ತು, ಸಮಿತಿ ಪ್ರಮುಖರಾದ ವೈ. ಪ್ರಫುಲ್ಲ ಶೆಟ್ಟಿ ಎಲ್ಲೂರುಗುತ್ತು, ಪ್ರಭಾಕರ ಶೆಟ್ಟಿ ಎಲ್ಲೂರುಗುತ್ತು, ಕರುಣಾಕರ ಶೆಟ್ಟಿ ಪಣಿಯೂರುಗುತ್ತು, ಸುಕುಮಾರ್ ಶೆಟ್ಟಿ ನಡಿಮನೆ, ಉದಯ ಶೆಟ್ಟಿ ಮೊದಲಾದವರು ಉಪಸ್ಥಿತರಿರಲಿದ್ದಾರೆ. ಫೆ. 24ರಂದು ಸಂಜೆ 7 ಗಂಟೆಗೆ ಭಂಡಾರ ಇಳಿಯುವುದು, ನಂತರ ಅನ್ನಸಂತರ್ಪಣೆ, ರಾತ್ರಿ 9 ಗಂಟೆಗೆ ಸಾಂಪ್ರಧಾಯಿಕ ದೊಂದಿ ಬೆಳಕಿನ ಸಂಯೋಜನೆಯಲ್ಲಿ ಬಬ್ಬುಸ್ವಾಮಿ ದೈವದ ನೇಮ, ೨ ಗಂಟೆಗೆ ತನ್ನಿಮಾನಿಗ ನೇಮ, ಫೆ. 25ರಂದು ಬೆಳಗ್ಗೆ 9 ಗಂಟೆಗೆ ಜುಮಾದಿ ಬಂಟ ದೈವಗಳ ನೇಮ, ಸಂಜೆ 4 ಗಂಟೆಗೆ ಗುಳಿಗ ದೈವದ ನೇಮ ನಡೆಯಲಿದೆ ಎಂದರು

Related Posts

Leave a Reply

Your email address will not be published.