ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್ ರದ್ದು : ಸುಪ್ರೀಂ ಕೋರ್ಟಿಗೆ ಪ್ರಮಾಣಪತ್ರ ಸಲ್ಲಿಕೆ

ಉತ್ತರಾಖಂಡ ಸರಕಾರವು ರಾಮದೇವ್ ಅವರ ಆಯುರ್ವೇದ ಸಂಸ್ಥೆಯ 14 ಉತ್ಪನ್ನಗಳ ಪರವಾನಗಿ ರದ್ದು ಪಡಿಸಿದೆ. ಆ ಬಗೆಗೆ ಸಂಪೂರ್ಣ ಮಾಹಿತಿಯನ್ನು ಇಂದು ಬೆಳಿಗ್ಗೆ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದೆ.


ದಿವ್ಯಾ ಫಾರ್ಮಸಿಯ ದೃಷ್ಟಿ ಐ ಡ್ರಾಪ್, ಸ್ವಸರಿ ಗೋಲ್ಡ್, ಸ್ವಸರಿ ವಟಿ, ಬ್ರಾಂಕೋಮ್, ಸ್ವಸರಿ ಪ್ರವಾಹಿ, ಸ್ವಸರಿ ಅವಲೇಹ್, ಮುಕ್ತಾ ವಟಿ ಎಕ್ಸ್ಟ್ರಾ ಪವರ್, ಲಿಪಿಡಮ್, ಬಿಪಿ ಗ್ರಿಟ್, ಮಧುಗ್ರಿಟ್, ಮಧುನಾಶಿನಿ ವಟಿ, ಲಿವಾಮೃತ್ ಅಡ್ವಾನ್ಸ್, ಲಿವೋ ಗ್ರಿಟ್ ಈ ಎಲ್ಲ ಪತಂಜಲಿ ಉತ್ಪನ್ನಗಳ ಲೈಸೆನ್ಸ್ ರದ್ದಾಗಿದೆ. ಈ 14 ಉತ್ಪಾದನೆಗಳ ಬಗೆಗೆ ದಾರಿ ತಪ್ಪಿಸುವ ಜಾಹೀರಾತು ನೀಡಲಾಗಿತ್ತು ಎಂದು ದೂರಲಾಗಿತ್ತು. ಸುಪ್ರೀಂ ಕೋರ್ಟು ತೀವ್ರ ತರಾಟೆಗೆ ತೆಗೆದುಕೊಂಡ ಮೇಲೆ ರಾಮದೇವ್‍ರ ಕಂಪೆನಿಯ ಒಂದೊಂದೇ ಕರ್ಮಕಾಂಡಗಳು ಬಹಿರಂಗವಾಗುತ್ತಿವೆ.

add tree house

Related Posts

Leave a Reply

Your email address will not be published.