ಮೇ 28ರಂದು ಯಕ್ಷಧ್ರುವ ಪಟ್ಲ ಸಂಭ್ರಮ-2023
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿ ಮೇ 27ರಂದು ಹೈಸ್ಕೂಲ್ ಮತ್ತು ಕಾಲೇಜು ವಿದ್ಯಾರ್ಥಿಗಳ ಯಕ್ಷಗಾನ ಸ್ಪರ್ಧೆ ಮೇ 28ರಂದು ಯಕ್ಷಧ್ರುವ ಪಟ್ಲ ಸಂಭ್ರಮವು ಅಡ್ಯಾರ್ ಗಾರ್ಡ್‍ನಲ್ಲಿ ನಡೆಯಲಿದೆ ಎಂದು ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು.
ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಪಟ್ಲ ಫೌಂಡೇಶನ್ ವತಿಯಿಂದ ವಿನೂತನ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಈ ಬಾರಿಯೂ ಯಕ್ಷಗಾನ ಸಪ್ತಸ್ವರ, ಯಕ್ಷಧ್ರುವ ಪಟ್ಲ ಪ್ರಶಸ್ತಿ ಪ್ರದಾನ, ಗೌರವಾರ್ಪಣೆ, ಮರಣೋತ್ತರ ಗೌರವ ನೀಡಲಾಗುವುದು. ಈಗಾಗಲೇ ಕಳೆದ ಏಳು ವರ್ಷಗಳಲ್ಲಿ 8.5 ಕೋಟಿ ರೂಪಾಯಿ ಮೊತ್ತದ ಸೇವಾ ಯೋಜನೆಯನ್ನು ಕಲಾವಿದರಿಗೆ ವಿತರಿಸಲಾಗಿದೆ ಎಂದರು.
ಕದ್ರಿ ನವನೀತ್ ಶೆಟ್ಟಿ ಮಾತನಾಡಿ, ಎರಡು ದಿನಗಳ ಕಾಲ ಪಟ್ಲ ಸಂಭ್ರಮ ಕಾರ್ಯಕ್ರಮ ನಡೆಯಲಿದೆ. ಹೈಸ್ಕೂಲ್ ಮತ್ತು ಕಾಲೇಜು ವಿದ್ಯಾರ್ಥಿಗಳ ಯಕ್ಷಗಾನ ಬಯಲಾಟ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಕುಂಬ್ಳೆ ಸುಂದರ ರಾವ್ ವೇದಿಕೆ ಮತ್ತು ಡಾ. ಪುತ್ತೂರು ಶ್ರೀಧರ ಭಂಡಾರಿ ವೇದಿಕೆಯಲ್ಲಿ ಯಕ್ಷಗಾನ ಸ್ಪರ್ಧೆ ನಡೆಯಲಿದೆ ಎಂದರು.
ಈ ಸಂದರ್ಭ ಸುದ್ದಿಗೋಷ್ಟಿಯಲ್ಲಿ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ, ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ, ಉಪಾಧ್ಯಕ್ಷ ಡಾ. ಮನು ರಾವ್ ಉಪಸ್ಥಿತರಿದ್ದರು.