ಫೆ.10ರಂದು ಕರಾವಳಿಯಾದ್ಯಂತ ಪಿಲಿ ತುಳು ಸಿನಿಮಾ ಬಿಡುಗಡೆ

ಮಂಗಳೂರು: ಎನ್.ಎನ್.ಎಮ್. ಫ್ರೊಡಕ್ಷನ್ ಲಾಂಛನದಲ್ಲಿ ಆತ್ಮಾನಂದ ರೈ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ತುಳು ಚಿತ್ರ “ಪಿಲಿ” ತೆರೆಗೆ ಬರಲು ಸಿದ್ಧವಾಗಿದೆ ಎಂದು ಸಿನಿಮಾದ ಛಾಯಾಗ್ರಾಹಕ ನಿರ್ದೇಶಕ ಮಯೂರ್ ಆರ್. ಶೆಟ್ಟಿ ತಿಳಿಸಿದ್ದಾರೆ.
ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ದುಬೈನಲ್ಲಿ ಈಗಾಗಲೇ ಚಿತ್ರದ ಶೋ ನಡೆದಿದ್ದು, ಅಪಾರ ಜನ ಮೆಚ್ಚುಗೆ ಪಡೆದಿದೆ, ತುಳುನಾಡಿನ ಸಂಸ್ಕೃತಿ, ಆಚರಣೆ ಮತ್ತು ನಂಬಿಕೆಗಳಲ್ಲಿ ಒಂದಾಗಿರುವ ಹುಲಿ ಕುಣಿತದ ಕಥಾವಸ್ತುವನ್ನು ಹೊಂದಿರುವಂತಹ ಚಿತ್ರ ‘ಪಿಲಿ’ . ತುಳುನಾಡಿನಲ್ಲಿ ಹುಲಿಕುಣಿತಕ್ಕೆ ಅದರದ್ದೇ ಆದ ಗೌರವ ಮತ್ತು ಇತಿಹಾಸ ಇದೆ. ಆ ಗೌರವಕ್ಕೆ ಧಕ್ಕೆ ಬಂದಾಗ, ಆಚರಣೆಯಲ್ಲಿ ಆಗುವಂತಹ ಲೋಪಗಳಿಗೆ ಏನೆಲ್ಲ ದೋಷ, ದುರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎನ್ನುವುದನ್ನು ಈ ಚಿತ್ರದ ಮೂಲಕ ಬಹಳ ಸೊಗಸಾಗಿ ಕಟ್ಟಿಕೊಡಲಾಗಿದೆ ಎಂದು ಹೇಳಿದರು. ಆನಂತರ ನ, ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ಮಾತನಾಡಿ, ಚಿತ್ರ ಅದ್ಭುತವಾಗಿ ಮೂಡಿಬಂದಿದೆ. ಎಲ್ಲರೂ ಸಿನಿಮಾ ನೋಡಿ ಹಾರೈಸಿ ಎಂದು ಹೇಳಿದರು.

ಭರತ್ ರಾಮ್ ರೈ ಸಹ-ನಿರ್ಮಾಕರಾಗಿರುವ ಈ ಸಿನಿಮಾಕ್ಕೆ ಭರವಸೆಯ ಯುವ ನಟ ಭರತ್ ಭಂಡಾರಿಯವರು ಕಥೆ ಬರೆದು, ಮೊದಲ ಬಾರಿಗೆ ನಾಯಕ ನಟನಾಗಿ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಚಿತ್ರ ಇದಾಗಿದೆ. ಚಿತ್ರದಲ್ಲಿ ವಿಜಯ್‍ಕುಮಾರ್ ಕೊಡಿಯಾಲ್‍ಬೈಲ್ ಬಹುಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ, ನಾಯಕನಾಗಿ ಭರತ್ ಭಂಡಾರಿ, ಜೊತೆಗೆ ಸ್ವಾತಿ ಶೆಟ್ಟಿ, ತ್ರಿಷಾ ಶೆಟ್ಟಿ, ಕೃತಿ ಶೆಟ್ಟಿ, ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ವಿಸ್ಮಯ ವಿನಾಯಕ್, ಸ್ವರಾಜ್ ಶೆಟ್ಟಿ, ಸಂತೋಷ್ ಶೆಟ್ಟಿ, ರೂಪ ಡಿ ಶೆಟ್ಟಿ, ಉಮೇಶ್ ಮಿಜಾರ್, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ದೀಪಕ್ ರೈ ಪಾಣಾಜೆ, ಚೇತನ್ ರೈ ಮಾಣಿ ಸೇರಿದಂತೆ ಹಲವಾರು ಪ್ರಭುದ್ಧ ಕಲಾವಿದರು ವಿಭಿನ್ನ ಪಾತ್ರಗಳಲ್ಲಿ ಮಿಂಚಿದ್ದಾರೆ.
ಈ ಚಿತ್ರಕ್ಕೆ ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ. ಗಣೇಶ್ ನೀರ್ಚಾಲ್ ಅವರ ಸಂಕಲನ ಈ ಚಿತ್ರಕ್ಕಿದೆ. ಸುಂದರವಾದ ನಾಲ್ಕು ಹಾಡುಗಳಿಗೆ ಮಯೂರ್ ಆರ್. ಶೆಟ್ಟಿ, ಡಿ.ಬಿ.ಸಿ ಶೇಖರ್ ಮತ್ತು ಕೆ.ಕೆ. ಪೇಜಾವರ್ ಸಾಹಿತ್ಯ ಬರೆದಿದ್ದಾರೆ. ಈ ಚಿತ್ರಕ್ಕೆ ಸಂದೇಶ್ ಬಿಜೈ ಸಂಭಾಷಣೆ ಬರೆದಿದ್ದು, ನಿರ್ದೇಶನ ತಂಡದಲ್ಲಿ ಚಿತ್ರ ನಿರ್ದೇಶಕ ತ್ರಿಶೂಲ್ ಶೆಟ್ಟಿ, ಸಂದೇಶ್ ಬಿಜೈ ಮುಂತಾದವರು ಕಾರ್ಯ ನಿರ್ವಹಿಸಿದ್ದಾರೆ. ಪ್ರಚಾರ ಕಲೆ ವಿನ್ಯಾಸ ದೇವಿ ರೈಯವರದ್ದಾಗಿದೆ. ತುಳುನಾಡಿನ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಪೆÇಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಸೇರಿದಂತೆ ಮಂಗಳೂರಿನ ಸುತ್ತಮುತ್ತ ಇರುವಂತಹ ಹಲವಾರು ಸುಂದರ ತಾಣಗಳಲ್ಲಿ ಈ ಚಿತ್ರದ ಚಿತ್ರೀಕರಣ ನಡೆದಿದ್ದು, ಚಿತ್ರ ಬಹಳ ಸುಂದರವಾಗಿ ಮೂಡಿಬಂದಿದೆ.