ಪೊಳಲಿ ದೇವಳದ ಚೆಂಡಿನ ಗದ್ದೆಯಲ್ಲಿ ಭತ್ತ ನಾಟಿ

ಬಂಟ್ವಾಳ: ದ.ಕ.ಜಿ.ಪಂ., ಬಂಟ್ವಾಳ ಕೃಷಿ ಇಲಾಖೆಯ ಸಹಯೋಗದೊಂದಿಗೆ ಪೊಳಲಿ ದೇವಳದ ಚೆಂಡಿನ ಗದ್ದೆಯಲ್ಲಿ ಯಾಂತ್ರೀಕೃತ ಭತ್ತದ ನಾಟಿ ಕಾರ್ಯಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸ್ಥಳೀಯರ ಸಹಕಾರದೊಂದಿಗೆ ಚೆಂಡಿನ ಗದ್ದೆಯಲ್ಲಿ ಭತ್ತದ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಎಂಒ4 ಭದ್ರಾ ತಳಿಯನ್ನು ಬಿತ್ತನೆ ಮಾಡಲಾಗಿದೆ.

ಯುವಕರು ಭತ್ತದ ಬೇಸಾಯದಲ್ಲಿ ತೊಡಗಲು ಪ್ರೇರಣೆ ನೀಡುವ ನಿಟ್ಟಿನಲ್ಲಿ ಪ್ರತಿವರ್ಷ ಈ ಕಾರ್ಯ ಮಾಡಲಾಗುತ್ತಿದೆ ಎಂದರು. ದೇವಳದ ಅರ್ಚಕ ನಾರಾಯಣ ಭಟ್ ಅವರು ಪ್ರಾರ್ಥನೆ ಸಲ್ಲಿಸಿದ ಬಳಿಕ ಶಾಸಕರು ಚಾಲನೆ ನೀಡಿದರು. ಈ ವೇಳೆ ಪೊಳಲಿ ಸಿಎ ಬ್ಯಾಂಕ್ ಉಪಾಧ್ಯಕ್ಷ ವೆಂಕಟೇಶ್ ನಾವಡ, ನಿರ್ದೇಶಕ ಸುಕೇಶ್ ಚೌಟ, ತಾ.ಪಂ.ಮಾಜಿ ಸದಸ್ಯ ಯಶವಂತ ಪೆÇಳಲಿ, ಕರಿಯಂಗಳ ಗ್ರಾ.ಪಂ. ಮಾಜಿ ಅಧ್ಯಕ್ಷೆ ಚಂದ್ರಾವತಿ ದೇವಾಡಿಗ, ಸದಸ್ಯ ಲೋಕೇಶ್ ಭರಣ ಬಂಟ್ವಾಳ ಸಹಾಯಕ ಕೃಷಿ ನಿರ್ದೇಶಕ ನಂದನ್ ಶೆಣೈ, ಕೃಷಿ ಅಧಿಕಾರಿ ಬಿ.ಬಿ.ಅನಗವಾಡಿ ಮೊದಲಾದವರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.