ಪುತ್ತೂರು : ಅಂತರ್ ರಾಜ್ಯ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು

ಕಳೆದ ಒಂದೂವರೆ ತಿಂಗಳ ಹಿಂದೆ ಚಿನ್ನಾಭರಣ ಕಳ್ಳತನ ಮಾಡಿದ್ದ ತಮಿಳುನಾಡು ಮೂಲದ ಅಂತರ್ ರಾಜ್ಯ ಕಳ್ಳತನ ಪ್ರಕರಣವನ್ನು ಭೇದಿಸಿದ ಪುತ್ತೂರು ನಗರ ಪೊಲೀಸರು ತಮಿಳುನಾಡಿನ ಮಹಿಳೆಯನ್ನು ಬಂಧಿಸಿ ಸುಮಾರು 6 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ.

ಕಳೆದ ಫೆ.12ರಂದು ಪುತ್ತೂರು ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ರೇಷ್ಮಾ ಎನ್ ಎಂಬವರ ಬ್ಯಾಗಿನಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.

ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಪ್ರಕರಣದ ಆರೋಪಿ ತಮಿಳುನಾಡು ಮೂಲದ ಅಂತರ್ ರಾಜ್ಯ ಕಳ್ಳತನ ಪ್ರಕರಣದ ಆರೋಪಿಯಾದ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಈಶ್ವರಿ (45) ಎಂಬಾಕೆಯನ್ನು ಬಂಧಿಸಿದ್ದಾರೆ. ಆಕೆಯಿಂದ ಕಳವು ನಡೆಸಿದ,ಸುಮಾರು ರೂ. 6 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಸ್ವಾಧಿನಪಡಿಸಿಕೊಳ್ಳಲಾಗಿದೆ.

ಈ ಪ್ರಕರಣವನ್ನು ಬೇದಿಸುವಲ್ಲಿ ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ ಬಿ ರಿಷ್ಯತ್ ಮತ್ತು ದ ಕ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಧರ್ಮಪ್ಪ ಎಮ್ ಎನ್ ರವರ ನಿರ್ದೇಶನದಲ್ಲಿ ಪುತ್ತೂರು ಉಪವಿಭಾಗದ ಉಪಾಧೀಕ್ಷಕರಾದ ಅರುಣ್ ನಾಗೇಗೌಡ ರವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

Related Posts

Leave a Reply

Your email address will not be published.