ಗ್ರಾಮ ಪಂಚಾಯತ್ ಪ್ರತಿನಿಧಿಗಳ ಗೌರವಧನ ಹೆಚ್ಚಳ, ರಾಜ್ಯ ಬಿಜೆಪಿ ಸರಕಾರಕ್ಕೆ ಪ್ರಭಾಕರ ಪ್ರಭು ಅಭಿನಂದನೆ

ಬಂಟ್ವಾಳ: ಗ್ರಾಮೀಣ ಭಾಗದಲ್ಲಿ ಜನಸಾಮಾನ್ಯರ ತಳಮಟ್ಟದ ಎಲ್ಲಾ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳಿಗೆ ನೇರವಾಗಿ ಸ್ಪಂದಿಸುವ ಮೂಲಕ ಜನರ ಮನೆ -ಮನದಲ್ಲಿ ಇರುವ ಗ್ರಾಮ ಪಂಚಾಯತ್ ಪ್ರತಿನಿಧಿಗಳ ಸಂಕಷ್ಟವನ್ನು ಅರಿತು ಅವರ ಬೇಡಿಕೆಗೆ ಶೀಘ್ರದಲ್ಲಿ ಸ್ಪಂದಿಸಿ ಗೌರವ ಧನವನ್ನು ಇಮ್ಮಡಿಗೆ ಏರಿಸಿ ಸರಕಾರದ ಮಟ್ಟದಲ್ಲಿ ಆಧ್ಯಾದೇಶ ಹೊರಡಿಸಿರುವ ಕರ್ನಾಟಕ ರಾಜ್ಯ ಬಿಜೆಪಿ ಸರಕಾರ ಹಾಗೂ ಮುಖ್ಯಮಂತ್ರಿಗಳಿಗೆ ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ಇದರಿಂದಾಗಿ ಗ್ರಾಮ ಪಂಚಾಯತ್ ಸದಸ್ಯರ ಬೇಡಿಕೆ ಗರಿಷ್ಠ ಪ್ರಮಾಣದಲ್ಲಿ ಈಡೇರಿಸಿದಂತಾಗಿದ್ದು, ಪ್ರಾರಂಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಿಗೆ ಕೊಟ್ಟ ಭರವಸೆ ಉಳಿಸಿದಂತಾಗಿದೆ ಎಂದು ಹೇಳಿದ್ದಾರೆ.

ಗ್ರಾಮ ಪಂಚಾಯತ್ ಸದಸ್ಯರ ಎಲ್ಲಾ ಬೇಡಿಕೆಗಳಿಗೆ ಪ್ರಾರಂಭದಿಂದಲೂ ಬೆಂಬಲಿಸುವ ಮೂಲಕ ಈ ಬಗ್ಗೆ ಹೋರಾಟ ಮಾಡಿ, ಸದನದಲ್ಲಿ ಬೇಡಿಕೆ ಈಡೇರಿಕೆಗೆ ಪಟ್ಟು ಹಿಡಿದು ಸತತವಾಗಿ ಸರಕಾರದ ಗಮನ ಸೆಳೆಯುವುದರೊಂದಿಗೆ, ಮುಖ್ಯ ಮಂತ್ರಿಗಳೊಂದಿಗೆ ನಿರಂತರ ಸಂಪರ್ಕ ಮಾಡುವ ಮೂಲಕ ಗ್ರಾಮ ಪಂಚಾಯತ್ ಸದಸ್ಯರ ಗೌರವ ಧನ ಹೆಚ್ಚಳಕ್ಕೆ ಕಾರಣಿ ಕರ್ತರಾದ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಯಾಗಿರುವ ರಾಜ್ಯ ಸರಕಾರದ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಯವರಿಗೆ ಮತ್ತು ಕಾಲ ಕಾಲಕ್ಕೆ ಸರಕಾರಕ್ಕೆ ಸಲಹೆಗಳನ್ನು ನೀಡುತ್ತಾ ಗ್ರಾ. ಪಂ. ಸದಸ್ಯರ ಬೇಡಿಕೆ ಈಡೇರಿಸಲು ಪ್ರಯತ್ನಿಸಿದ ಸಂಸದರು, ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರುಗಳಿಗೆ ಪ್ರಭಾಕರ ಪ್ರಭು ಕೃತಜ್ಞತೆ ಸಲ್ಲಿಸಿದ್ದಾರೆ.

Related Posts

Leave a Reply

Your email address will not be published.