ಮಂಗಳೂರು: ಡಾ. ಪ್ರಭಾಕರ ನೀರ್‌ಮಾರ್ಗ ಅವರಿಗೆ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಮಂಗಳೂರು ವಿಶ್ವ ವಿದ್ಯಾನಿಲಯದ ಮಾಜಿ ಉಪ ನೋಂದಣಾಧಿಕಾರಿ ಹಾಗೂ ಮ್ಯಾಪ್ಸ್ ಇವ್‌ನಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಭಾಕರ ನೀರ್‌ಮಾರ್ಗ ಅವರು ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಈ ಬಾರಿಯ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ನಗರದ ನೆಹರೂ ಮೈದಾನದಲ್ಲಿ ಇಂದು ಬೆಳಗ್ಗೆ ನಡೆದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.