ಕಾಂಗ್ರೆಸ್ ದುರಾಡಳಿತದಿಂದ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ : ವಿಧಾನ ಪರಿಷತ್ ಸದಸ್ಯ ಪ್ರತಾಪ್‍ಸಿಂಹ ನಾಯಕ್ ಹೇಳಿಕೆ

ಬಂಟ್ವಾಳ: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸುತ್ತಿದ್ದು ಮುಂದೆ ನಡೆಯುವ ವಿಧಾನ ಪರಿಷತ್ ಚುನಾವಣೆ ಸರಕಾರದ ಬಗ್ಗೆ ಜನಾಭಿಪ್ರಾಯ ತಿಳಿಸುವ ಚುನಾವಣೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ವ್ಯಾಖ್ಯಾನಿಸಿದರು.

ಅವರು ಬಿ.ಸಿ.ರೋಡಿನಲ್ಲಿರುವ ಬಿಜೆಪಿ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾಂಗ್ರೆಸ್‍ನ ಚುನಾವಣೆಯ ಮೌಲ್ಯಮಾಪನವನ್ನು ಮಾಡಲಿದ್ದು ಹೆಚ್ಚು ಮಹತ್ವ ಪಡೆದುಕೊಂಡಿದೆ. ನಾವೇನೇ ಮಾಡಿದರೂ ನಡೆಯುತ್ತದೆ ಎನ್ನುವ ಸರ್ವಾಧಿಕಾರಿ ಧೋರಣೆಯನ್ನು ಕಾಂಗ್ರೆಸ್ ಮಾಡುತ್ತಿದೆ. ವಾಲ್ಮೀಕಿ ನಿಗಮದಲ್ಲಿ ನಡೆದ 187 ಕೋಟಿ ರೂ. ಅವ್ಯವಹಾರ ಇದಕ್ಕೆ ಉದಾಹರಣೆಯಾಗಿದೆ ಎಂದು ಆರೋಪಿಸಿದರು. ಈ ಭ್ರಷ್ಟಾಚಾರದ ಸಮಗ್ರ ತನಿಖೆಯನ್ನು ಸಿಬಿಐ ಮೂಲಕ ಮಾಡಬೇಕೆಂದು ಬಿಜೆಪಿ ಆಗ್ರಹಿಸುವುದಾಗಿ ತಿಳಿಸಿದರು.

ಕಳೆದ ಬಜೆಟ್‍ನಲ್ಲಿ ಸರಕಾರ ಕಡಿಮೆ ಹಣವನ್ನು ಶಿಕ್ಷಣ ಕ್ಷೇತ್ರಕ್ಕೆ ನೀಡಿದೆ. ಕಳೆದ ಒಂದು ವರ್ಷದಿಂದ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಸರಕಾರ ಕಾನೂನು ಬಾಹಿರ ಚಟುವಟಿಕೆಗಳಿಗೆ ಸ್ವಾತಂತ್ರ್ಯ ನೀಡಿದೆ. ಜೈನ ಮುನಿ ಹತ್ಯೆಯಿಂದ ಆರಂಭವಾಗಿ ಚೆನ್ನಗಿರಿ ಠಾಣೆಯಲ್ಲಿ ನಡೆದ ಘಟನೆಯವರೆಗೂ ಅನೇಕ ಸಮಾಜಘಾತುಕ ಘಟನೆಗಳು ಸರಕಾರ ಬಂದ ಬಳಿಕ ನಡೆದಿದೆ. ಇಂತಹ ಚಟುವಟಿಕೆಗಳ ಮೇಲೆ ನಿಯಂತ್ರಣ ಇಲ್ಲವಾಗಿದೆ. ಇದಕ್ಕೆಲ್ಲ ಕಾಂಗ್ರೆಸ್ ತುಷ್ಟೀಕರಣವೇ ಕಾರಣ ಎಂದು ಆರೋಪಿಸಿದ ಅವರು ಈ ಎಲ್ಲಾ ಕಾರಣದಿಂದ ಬುದ್ದಿವಂತ ಮತದಾರರಾದ ಪದವೀಧರರು ಹಾಗೂ ಶಿಕ್ಷಕರು ಎನ್‍ಡಿಎ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಲಿದ್ದಾರೆ ಎಂದರು.

ಬಂಟ್ವಾಳ ಶಾಸಕ ರಾಜೇಶ್ ನಾಕ್, ಬಿಜೆಪಿ ಮಂಡಲ ಅಧ್ಯಕ್ಷ ಚೆನ್ನಪ್ಪ ಆರ್.ಕೋಟ್ಯಾನ್ ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಟೂರು ಓಬಿಸಿ ಮೋರ್ಚಾ ಜಿಲ್ಲಾ ಕಾಐದರ್ಶಿಘ ಮೋನಪ್ಪ ದೇವಸ್ಯ, ಮಂಡಲ ಪ್ರಧಾನಕಾರ್ಯದರ್ಶಿಗಳಾದ ಡೊಂಬಯ ಅರಳ
ರವೀಶ್ ಶೆಟ್ಟಿ ಕರ್ಕಳ, ದೇವಪ್ಪ ಪೂಜಾರಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಸುದರ್ಶನ್ ಬಜ ಉಪಸ್ಥಿತರಿದ್ದರು.

add - tandoor

Related Posts

Leave a Reply

Your email address will not be published.