ಕೊಂಡೆವೂರಿನಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಚಂಡಿಕಾ ಯಾಗ
ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದ ಶ್ರೀ ಗಾಯತ್ರೀ ದೇವಿ ಹಾಗೂ ಭಗವಾನ್ ನಿತ್ಯಾನಂದ ಗುರುದೇವರ ಪ್ರತಿಷ್ಠಾ ವರ್ಧಂತಿ ಕಾರ್ಯಕ್ರಮವು ಕೊಂಡೆವೂರು ಮಠದ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ, ಶ್ರೀಕ್ಷೇತ್ರ ಕಟೀಲಿನ ಅನುವಂಶಿಕ ಪ್ರಧಾನ ಅರ್ಚಕರಾದ ಬ್ರಹ್ಮಶ್ರೀ ಕಮಲಾದೇವೀ ಪ್ರಸಾದ ಆಸ್ರಣ್ಣರವರ ಆಚಾರ್ಯತ್ವದಲ್ಲಿ ದಿ. 22.02.2024 ಗುರುವಾರದಂದು, ಚಂಡಿಕಾ ಹೋಮ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಮಧ್ಯಾಹ್ನ ನಂತರ, ಸದ್ಗುರು ಶ್ರೀ ನಿತ್ಯಾನಂದ ವಿದ್ಯಾಪೀಠ ಕೊಂಡೆವೂರು, ಇದರ ವಿದ್ಯಾರ್ಥಿಗಳಿಂದ ಯಕ್ಷಗಾನ ಬಯಲಾಟ ‘‘ಮಹಿಷ ವಧೆ’’ (ಯಕ್ಷಗುರು ಶ್ರೀ ರಾಮ ಸಾಲ್ಯಾನ್ ಮಂಗಲ್ಪಾಡಿ ಇವರ ನಿರ್ದೇಶನದಲ್ಲಿ) ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಪಾಲ್ಗೊಂಡು ಶ್ರೀ ದೇವರ ಪ್ರಸಾದ ಸ್ವೀಕರಿಸಿ ಕೃತಾರ್ಥರಾಗಬೇಕಾಗಿ ಕೊಂಡೆವೂರು ಮಠದ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.