ಹುಟ್ಟೂರಿನಲ್ಲಿ ಪ್ರವೀಣ್ ಅವರ ಪ್ರಾರ್ಥಿವ ಶರೀರಕ್ಕೆ ಅಂತಿಮ ನಮನ

ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ, ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರ್ ಅವರ ಸ್ವಗ್ರಾಮ ಬೆಳ್ಳಾರೆಯ ನೆಟ್ಟಾರುವಿನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಬಿಲ್ಲವ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಸಲಾಯಿತು. ಈ ವೇಳೆ ಕುಟುಂಬಸ್ಥರಿಗೆ ಮಾತ್ರ ಅವಕಾಶ ನೀಡಲಾಗಿದೆ. ಪ್ರವೀಣ್‌ ಪತ್ನಿ, ತಂದೆ-ತಾಯಿ ಸೇರಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ತಂದೆಯೇ ಮಗನ ಚಿತೆಗೆ ಅಗ್ನಿ ಸ್ಪರ್ಶ ನೀಡುವ ಮೂಲಕ ಅಂತಿಮ ಸಂಸ್ಕಾರ ನಡೆಸಲಾಯಿತು.

Related Posts

Leave a Reply

Your email address will not be published.