ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೋರ್ವ ಆರೋಪಿ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೋರ್ವ ಅರೋಪಿಯನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಡಿಕೇರಿ ಮೂಲದ ತುಫೈಲ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಆತನನ್ನು ಎನ್‌ಐಎ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ.2022 ರ ಜುಲೈ 26 ರಂದು ರಾತ್ರಿ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಕೊಲೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹತ್ತು ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ಪ್ರಸ್ತುತ ಎನ್‌ಐಎ ಪ್ರಕರಣದ ತನಿಖೆ ಮಾಡುತ್ತಿದೆ.