ಪ್ರವೀಣ್ ಕೊಲೆ ಖಂಡಿಸಿ ಡಾ.ಪ್ರಣಾವನಂದ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ

ಪ್ರವೀಣ್ ನೆಟ್ಟಾರು ಕೊಲೆಯನ್ನು ಖಂಡಿಸಿ ಆರ್ಯ ಈಡಿಗ ಮಹಾಮಂಡಲದ ರಾಷ್ಟ್ರೀಯ ಅಧ್ಯಕ್ಷ ಡಾ.ಪ್ರಣಾವನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಗುರುವಾರದಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು.ಬೆಂಗಳೂರು ಕಬ್ಬನ್ ಪಾರ್ಕ್ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಶ್ರೀ ಪ್ರಣಾವನಂದ ಸ್ವಾಮೀಜಿ ಅವರು , ಮೃತ ಪ್ರವೀಣ್ ಅವರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಹಾಗೂ ಅವರ ಪತ್ನಿಗೆ ಸರಕಾರಿ ಉದ್ಯೋಗ ನೀಡಬೇಕೆಂದು ಆಗ್ರಹಿಸಿದರು.
