ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಮುಖಂಡನ ಕಗ್ಗೊಲೆ : ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು..!

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡನ ಕಗ್ಗೊಲೆಯಾಗಿದೆ. ಬೆಳ್ಳಾರೆಯ ನೆಟ್ಟಾರು ನಿವಾಸಿ 32 ವರ್ಷದ ಪ್ರವೀಣ್ ನೆಟ್ಟಾರು ಎಂಬಾತನನ್ನು ದುಷ್ಕರ್ಮಿಗಳು ತಲ್ವಾರ್ ನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ಇಟ್ಟುಕೊಂಡಿದ್ದ ಪ್ರವೀಣ್ ತನ್ನ ಅಂಗಡಿಯನ್ನು ಬಂದ್ ಮಾಡುವ ವೇಳೆಗೆ ಒಂದೇ ಬೈಕ್ ನಲ್ಲಿ ಆಗಮಿಸಿದ ಮೂವರು ತಲ್ವಾರ್ ನಿಂದ ಹಲ್ಲೆ ಮಾಡಿ ಹೋಗಿದ್ದಾರೆ. ತಕ್ಷಣ ಸ್ಥಳೀಯರು ಪ್ರವೀಣ್ ನನ್ನು ಪುತ್ತೂರು ಆಸ್ಪತ್ರೆಗೆ ರವಾನಿಸಿದ್ದಾರೆ. ಅಷ್ಟೋತ್ತಿಗೆ ಗಂಭೀರವಾಗಿ ಗಾಯಗೊಂಡ ಪ್ರವೀಣ್ ಸಾವನ್ನಪ್ಪಿದ್ದಾರೆ ಅಂತಾ ಗೊತ್ತಾಗಿದೆ. ವಿಷಯ ತಿಳಿದ ತಕ್ಷಣ ಸಂಬಂಧಿಕರು, ಸ್ನೇಹಿತರು, ಬಿಜೆಪಿ ಕಾರ್ಯಕರ್ತರು, ಭಜರಂಗದಳ, ವಿಶ್ವಹಿಂದು ಪರಿಷತ್, ಹಿಂದು ಜಾಗರಣ ವೇಧಿಕೆ ಕಾರ್ಯಕರ್ತರು ಆಗಮಿಸಿದ್ರು. ಕೊಲೆಗೆ ಕಾರಣರಾದವರನ್ನು ಬಂಧಿಸಬೇಕು ಅಂತಾ ಪಟ್ಟು ಹಿಡಿದರು. ಪುತ್ತೂರು ಖಾಸಗಿ ಆಸ್ಪತ್ರೆಯಿಂದ ಶವವನ್ನು ಮರಣೋತ್ತರ ಪರೀಕ್ಷೆಗೆ ತೆದುಕೊಂಡ ಹೋಗಲು ಬಿಡೋದಿಲ್ಲ ಅಂತಾ ಪಟ್ಟು ಹಿಡಿದಿದ್ದಾರೆ. ಆಸ್ಪತ್ರೆ ಬಳಿ ಜಿಲ್ಲಾಧಿಕಾರಿ ಬರಬೇಕು ಅಂತಾ ಪಟ್ಟು ಹಿಡಿದಿದ್ದಾರೆ.