HomeFresh Newsಬಿಜೆಪಿ ಮುಖಂಡ ಪ್ರವೀಣ್ ಹತ್ಯೆ: ಆರೋಪಿಗಳ ಬಂಧನಕ್ಕೆ ಐದು ವಿಶೇಷ ತಂಡ ರಚನೆ.

ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ: ಆರೋಪಿಗಳ ಬಂಧನಕ್ಕೆ ಐದು ವಿಶೇಷ ತಂಡ ರಚನೆ.

ಪುತ್ತೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಗೆ ಐದು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ದಕ್ಷಿಣಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ಮೂವರ ತಂಡ ಈ ಕೃತ್ಯ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಹಿನ್ನಲೆ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ತನಿಖೆಗೆ ಐದು ವಿಶೇಷ ಪೋಲಿಸ್ ತಂಡವನ್ನು ರಚಿಸಲಾಗಿದ್ದು, ಎಲ್ಲಾ ಆಯಾಮಗಳಲ್ಲೂ ತನಿಖೆ ಕೈಗೆತ್ತಿಕೊಳ್ಳಲಾಗಿದೆ, ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರನ್ನು ವಿಚಾರಣೆ ಕೂಡಾ ಮಾಡಲಾಗುತ್ತಿದೆ.ಶೀಘ್ರವೇ ಆರೋಪಿಗಳನ್ನು ಪತ್ತೆ ಹಚ್ಚಲಾಗುತ್ತದೆ ಎಂದು ಎಸ್ಪಿ ಋಷಿಕೇಶ ಸೋನಾವಣೆ ಮಾಹಿತಿ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments