ಪ್ರೇಮಕಾಂತಿ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಸ್ಥಾಪಕಿ ಪ್ರೊ.ಪ್ರೇಮಲತಾ ಶೆಟ್ಟಿ ನಿಧನ
ಪ್ರೇಮಕಾಂತಿ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ಇ ದರ ಸ್ಥಾಪಕರಾದ ಪ್ರೊ.ಪ್ರೇಮಲತಾ ಶೆಟ್ಟಿ ಅಲ್ಪ ಕಾಲದ ಅಸೌಖ್ಯದಿಂದ ಗುರುವಾರ ತಾ.21-7-2022 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರಿಗೆ 91 ವರ್ಷ ಪ್ರಾಯವಾಗಿತ್ತು. ಸರಕಾರಿ ಕಾಲೇಜಿನ ಪ್ರಾಂಶುಪಾಲರಾಗಿ ಸುಮಾರು 40 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಜೀವನ ಹಾಗೂ ಶಿಕ್ಷಣ ರಂಗದಲ್ಲಿ ಎಜುಕೇಶನ್ ಟ್ರಸ್ಟ್ ಸ್ಥಾಪಿಸಿ ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆಯನ್ನು ಮುಂದುವರಿಸಿಕೊಂಡು ಬಂದಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ಸೆನೆಟ್ ಸದಸ್ಯರಾಗಿ ಭಾರತ್ ಸ್ಕೌಟ್ ಅಂಡ್ ಗೈಡ್ಸ್ ಇದರ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಸೇವೆಯನ್ನು ಸಲ್ಲಿಸಿದ್ದರು.