ಆಗಸ್ಟ್ 03 ರಂದು ಬೈಂದೂರಿನಲ್ಲಿ ಗಮ್ಮತ್ ಅದ್ದೂರಿ ಕಾರ್ಯಕ್ರಮಕ್ಕೆ ಸಿದ್ಧತೆ

ಬೈಂದೂರು: ಕುಂದಾಪ್ರ ಕನ್ನಡ ಭಾಷೆಯ ಬಗೆಗಿನ ಅಭಿಮಾನ ಹಾಗೂ ಗ್ರಾಮೀಣ ಸಂಸ್ಕೃತಿ ಸೊಗಡನ್ನು ಅನಾವರಣಗೊಳಿಸುವ ಉದ್ದೇಶದೊಂದಿಗೆ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಗ್ರಾಮೀಣ ಹಾಗೂ ಕೆಸರುಗದ್ದೆ ಕ್ರೀಡಾಕೂಟ ಗಮ್ಮತ್ತ್ ಕಾರ್ಯಕ್ರಮವನ್ನು ಅಗಸ್ಟ್ 03ರ ಭಾನುವಾರ ಬೆಳಿಗ್ಗೆ ಗಂಟೆ 09 ರಿಂದ ಬೈಂದೂರು ಯಡ್ತರೆಯ ನೆಲ್ಯಾಡಿ ಬೈಲ್ ಹಾಗೂ ಜೆ.ಎನ್.ಆರ್ ಕಲಾಮಂದಿರದಲ್ಲಿ ಸಂಭ್ರಮ ನಿದ್ದ ನಡೆಯಲಿದೆ
ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಉಪ್ಪುಂದ ಜೆ.ಎನ್.ಆರ್ ಕಲಾಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಪ್ರತಿ ಊರುಗಳಿಗೂ ಕೂಡ ಅದರದ್ದೆ ಆದ ಹಿನ್ನಲೆ ಹೊಂದಿದೆ.ಈ ನೆಲಯಲ್ಲಿ ಕುಂದಾಪ್ರ ಸಂಸ್ಕ್ರತಿ ಸಂಪ್ರದಾಯ ಆಚರಣೆ ಇಂದು ಜಾಗತಿಕ ಮಟ್ಟದ ಹಿರಿಮೆ ಹೊಂದಿದೆ.ಮುಂದಿನ ತಲೆಮಾರಿಗೆ ಮರೆತು ಹೋದ ಆಚರಣೆಗಳ ಪರಿಚಯದ ಜೊತೆಗೆ ನಮ್ಮ ನೆಲ,ಮೂಲ ಆಚರಣೆಯ ಪ್ರಸ್ತುತಿ ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ.ಸಮಾನ ಮನಸ್ಕರ ತಂಡ ಒಂದುಗೂಡಿ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ ಮೂಲಕ ಕಳೆದೊಂದು ವರ್ಷದಿಂದ ಅದ್ದೂರಿ ಕಾರ್ಯಕ್ರಮ ಆಯೋಜಿಸುತ್ತಾ ಬರಲಾಗುತ್ತಿದ್ದು, ಜನರಿಂದಲೂ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಲಾಗಿದ್ದು, ವಿಜೇತರಿಗೆ ನಗದು ಬಹುಮಾನ, ಪದಕ, ಪ್ರಶಸ್ತಿ ಪತ್ರಗಳನ್ನು ನೀಡಲಾಗುತ್ತಿದೆ ಎಂದರು.
ಕುದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನದ ಕಾರ್ಯದರ್ಶಿ ಸುನಿಲ್ ಹೆಚ್. ಜಿ. ಬೈಂದೂರು, ಸಂಚಾಲಕರಾದ ಅರುಣ್ ಕುಮಾರ್ ಶಿರೂರು, ಪ್ರಸಾದ್ ಪ್ರಭು ಶಿರೂರು, ಪ್ರಮುಖರಾದ ದಿವಾಕರ ಶೆಟ್ಟಿ ನೆಲ್ಯಾಡಿ,ರಘುರಾಮ ಕೆ. ಪೂಜಾರಿ ಶಿರೂರು, ಶೇಖರ ಪೂಜಾರಿ ಉಪ್ಪುಂದ, ಗೌರಿ ದೇವಾಡಿಗ, ಗಣೇಶ್ ಕೊಠಾರಿ, ಸವಿತಾ ದಿನೇಶ್, ಪ್ರಭಾಕರ ಶೆಟ್ಟಿ, ಅನುರ್ ಮೆಂಡನ್ ಮೊದಲಾದವರು ಉಪಸ್ಥಿತರಿದ್ದರು.