ಫಾಝಿಲ್ ಹಾಗೂ ಮಸೂದ್ ಹತ್ಯೆ ಪ್ರಕರಣದಲ್ಲಿ ಸರ್ಕಾರದಿಂದ ತಾರತಮ್ಯ
ಫಾಝಿಲ್ ಹಾಗೂ ಮಸೂದ್ ಹತ್ಯೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ತಾರತಮ್ಯ ನೀತಿ ತೋರುತ್ತಿದೆ ಎಂದು ಆರೋಪಿಸಿ ಮುಸ್ಲಿಂ ಐಕ್ಯತಾ ವೇದಿಕೆ ನೇತೃತ್ವದಲ್ಲಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ನಗರದ ಕ್ಲಾಕ್ ಟವರ್ ಸರ್ಕಲ್ ನಲ್ಲಿ ಪ್ರತಿಭಟನಾ ಸಭೆ ನಡೆದಿದ್ದು ನೂರಾರು ಜನ ರಾಜ್ಯ ಮತ್ತು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಮುಖ್ಯಮಂತ್ರಿ ಭೇಟಿ ನೀಡಿದ್ದಾರೆ. ಆದರೆ ಅದೇ ಸಂದರ್ಭದಲ್ಲಿ ಕೊಲೆಯಾದ ಮಸೂದ್ ಹಾಗು ಫಾಝಿಲ್ ಮನೆಗೆ ಭೇಟಿ ನೀಡದೆ ಮುಖ್ಯಮಂತ್ರಿ ಅನ್ಯಾಯ ಎಸಗಿದ್ದಾರೆ. ಎನ್‍ಐಎ ತನಿಖೆ ಹೆಸರಲ್ಲಿ ನ್ಯಾಯದ ಧ್ವನಿಯನ್ನು ದಮನಿಸಲು ಯತ್ನಿಸಲಾಗುತ್ತಿದೆ. ಎನ್‍ಐಎ ಮೂಲಕ ಅಮಾಯಕರನ್ನು ಬಂಧಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.