ಮಕ್ಕಳ ಬೌದ್ಧಿಕ ವಿಕಸನಕ್ಕೆ ಶಿಬಿರ ಪೂರಕ- ವಿಷ್ಣುಮೂರ್ತಿ ಆಚಾರ್
ಹಾಲಿನಂತೆ ಬಿಳುಪು ಮತ್ತು ಹೊಳಪಿನಿಂದ ಕೂಡಿರುವ ಮಕ್ಕಳ ಮನಸ್ಸಿಗೆ ಸಾಣೆ ಹಿಡಿದು ಸಂಸ್ಕಾರ ಕಲ್ಪಿಸಿಕೊಡುವುದು ಮುಖ್ಯ ಕರ್ತವ್ಯವಾಗಿದೆ ಈ ನಿಟ್ಟಿನಲ್ಲಿ ಈ ಶಿಬಿರ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಪೂರಕವಾಗಿದೆ ಎಂದು ವೇದ ವಿದ್ವಾಂಸರಾದ ವೇ.ಮೂ ವಿಷ್ಣುಮೂರ್ತಿ ಆಚಾರ್ ಪುನರೂರು ಪ್ರತಿಷ್ಠಾನ (ರಿ) ಆಶ್ರಯದಲ್ಲಿ ಹಾಗೂ ಜನ ವಿಕಾಸ ಸಮಿತಿ ಮೂಲ್ಕಿ ಸಹಕಾರದಲ್ಲಿ ಮಕ್ಕಳ ಬೌದ್ಧಿಕ ಬೆಳವಣಿಗೆಗಾಗಿ ಪುನರೂರು ಶ್ರೀ ವಿಶ್ವನಾಥ ದೇವಳದ ಸಭಾಂಗಣದಲ್ಲಿ ಉಚಿತವಾಗಿ ಆಯೋಜಿಸಿದ ಬಾಲ ವಿಕಾಸ ಶಿಬಿರ -2023 ನ್ನು ಉದ್ಘಾಟಿಸಿ ಮಾತನಾಡಿದರು.
ಈ ಸಮಾರಂಭದಲ್ಲಿ ಪುನರೂರು ಪ್ರತಿಷ್ಠಾನದ ಗೌರವ ಅಧ್ಯಕ್ಷರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿದ್ದರು. ಈ ಕಾರ್ಯಕ್ರಮಕ್ಕೆ ಕಟಿಲಿನ ಶ್ರೀ ದುರ್ಗಾಪರಮೇಶ್ವರೀ ದೇವಳದ ಅನುವಂಶಿಕ ಅರ್ಚಕರಾದ ವೇ.ಮೂ ಲಕ್ಷ್ಮೀನಾರಾಯಣ ಆಸ್ರಣ್ಣರು ಶುಭಾಶಂಸನೆಗೈದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರಿನ ದ.ಕ.ಜಿಲ್ಲಾ ಧಾರ್ಮಿಕ ಪರಿಷತ್ ನ ಸದಸ್ಯರಾದ ಕೊಡೆತ್ತೂರು ಭುವನಾಭಿರಾಮ ಉಡುಪ, ತೋಕೂರಿನ ಎಂ.ಆರ್.ಪೂಂಜಾ ಕೈಗಾರಿಕಾ ತರಬೇತಿ ಸಂಸ್ಥೆಯ ತರಬೇತಿ ಅಧಿಕಾರಿಯಾದ ಲಕ್ಷ್ಮೀಕಾಂತ ,ಪುನರೂರು ಪ್ರತಿಷ್ಠಾನ ಇದರ ಗೌರವಾಧ್ಯಕ್ಷರಾದ ಎಚ್.ಕೆ.ಉಷಾರಾಣಿ, ಜನವಿಕಾಸ ಸಮಿತಿ ಮೂಲ್ಕಿಯ ಅಧ್ಯಕ್ಷರಾದ ಶೋಭರಾವ್ ಹಾಗೂ ಜನವಿಕಾಸ ಸಮಿತಿ ಮೂಲ್ಕಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಪುನರೂರು ಪ್ರತಿಷ್ಠಾನದ ಅಧ್ಯಕ್ಷರಾದ ದೇವಪ್ರಸಾದ್ ಪುನರೂರು ಪ್ರಾಸ್ತಾವಿಕವಾಗಿ ಮಾತಾಡಿ ಅತಿಥಿಗಳನ್ನ ಸ್ವಾಗತಿಸಿದರು, ಜನವಿಕಾಸ ಸಮಿತಿ ಮೂಲ್ಕಿಯ ಪ್ರಧಾನ ಕಾರ್ಯದರ್ಶಿಯಾದ ಜೀವನ್ ಶೆಟ್ಟಿ ವಂದಿಸಿದರು, ಹಿತಾ ಉಮೇಶ್ ಕಾರ್ಯಕ್ರಮ ನಿರೂಪಿಸಿದರು.