ಪುತ್ತೂರಿನಲ್ಲಿ ನಾಡಪ್ರಭು ಕೆಂಪೇಗೌಡ ಥೀಮ್ ಪಾರ್ಕ್ ನಿರ್ಮಾಣ ಯೋಜನೆ
ಪುತ್ತೂರು:ನಾಡಪ್ರಭು ಕೆಂಪೇಗೌಡ ಥೀಮ್ ಪಾರ್ಕ್ ಪುತ್ತೂರಿನಲ್ಲಿ ನಿರ್ಮಿಸುವ ಯೋಜನೆಯಿದ್ದು, ಈಗಾಗಲೇ ನಗರಸಭೆ ಈ ಕುರಿತು ಆಸಕ್ತಿ ವಹಿಸಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.ಅವರು ಪುತ್ತೂರು ನಗರಸಭೆ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಥೀಮ್ ಪಾರ್ಕ್ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನದ ರಥವನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಾಗತಿಸಿ, ಬಳಿಕ ನಟರಾಜ ವೇದಿಕೆಯಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಂಸ್ಮರಣಾ ಜ್ಯೋತಿ ಪ್ರಜ್ವಲನೆ ಮಾಡಿದ ಸಹಾಯಕ ಆಯುಕ್ತ ಗಿರೀಶ್ ನಂದನ್ ಮಾತನಾಡಿ, ೫೦೦ ವರ್ಷಗಳ ದೂರದೃಷ್ಟಿತ್ವವುಳ್ಳ ಕೆಂಪೇಗೌಡರ ಆದರ್ಶಗಳನ್ನು ಆಧುನಿಕ ಅಭಿವೃದ್ಧಿಯಲ್ಲಿ ನಾವೆಲ್ಲರೂ ಪಾಲಿಸೋಣ ಎಂದರು.ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ,ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ,ಮುಖ್ಯ ಅತಿಥಿಗಳಾಗಿ ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ತಹಸೀಲ್ದಾರ್ ನಿಸರ್ಗಪ್ರಿಯ, ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ಪಾಲ್ಗೊಂಡಿದ್ದರು. ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ,ನಗರಸಭೆ ಪೌರಾಯುಕ್ತ ಮಧು ಎಸ್.ಮನೋಹರ್ ಈ ಸಂದರ್ಭದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ, ಕಂಚಿನ ಪ್ರತಿಮೆ ಹಾಗೂ ಥೀಮ್ ಪಾರ್ಕ್ನ ಕುರಿತು ಸಾಕ್ಷ÷್ಯಚಿತ್ರ ಪ್ರದರ್ಶನಗೊಂಡಿತು. ಬಳಿಕ ಅಭಿಯಾನ ರಥ ಉಪ್ಪಿನಂಗಡಿಗೆ ತೆರಳಿತು.