ಪುತ್ತೂರು : “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಗ್ರಾಮ ವಾಸ್ತವ್ಯ

ಪುತ್ತೂರು: ಕಾಲುವೆ ವಿಚಾರದಲ್ಲಿ ಜಾಗ ಅತಿಕ್ರಮಣ ಆಗಿದ್ದರೆ ಯಾವುದೇ ನೋಟೀಸ್ ನೀಡದೇ ತೆರವು ಮಾಡಿ. ಇಂದು ಬೆಂಗಳೂರು, ನಾಳೆ ನಮ್ಮೂರು. ಆದ್ದರಿಂದ ತೆರವು ಕಾರ್ಯವನ್ನು ನಿರ್ದಾಕ್ಷಿಣ್ಯವಾಗಿ ಮಾಡಿ ಎಂದು ದ.ಕ.ಜಿಲ್ಲಾ ಅಪರ ಜಿಲ್ಲಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ ಕಂದಾಯ ಅಧಿಕಾರಿಗಳು ಸೇರಿದಂತೆ ಗ್ರಾಪಂಗಳಿಗೆ ಕಡಕ್ ಆದೇಶ ನೀಡಿದರು. ಇದು ಮುರ ಗೌರ ಸಮುದಾಯ ಭವನದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಈ ಕುರಿತು ಕಬಕ ಗ್ರಾಪಂ ವ್ಯಾಪ್ತಿಯ ಕೃಷಿಕರೊಬ್ಬರು ತಮ್ಮ ಕೃಷಿ ಜಾಗದಲ್ಲಿ ಕಾಲುವೆ ಜಾಗವೊಂದರ ಅತಿಕ್ರಮಣವಾದ ವಿಚಾರವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಾಗ ಕಡಕ್ ಆಗಿ ಮಾತನಾಡಿದರು.

ಕಬಕ ಗ್ರಾಪಂ ವ್ಯಾಪ್ತಿಯಲ್ಲಿ ನಾನು ಸೇರಿ ಸುಮಾರು 60 ಮನೆಗಳಿಗೆ ರಸ್ತೆ ವ್ಯವಸ್ಥೆ ಇಲ್ಲ. ನಮಗೆ ರಸ್ತೆಯನ್ನು ಶೀಘ್ರ ಮಾಡಿಕೊಡಿ ಎಂದು ಜನಾರ್ದನ್ ಎಂಬವರು ತಿಳಿಸಿದಾಗ ಸ್ಥಳೀಯ ಭೀಮ್ ಭಟ್ ಎಂಬವರು ಇದಕ್ಕೆ ಬೇಕಾದ ರಸ್ತೆಯನ್ನು ನಾನು ಬಿಟ್ಟುಕೊಡುತ್ತೇವೆ. ನನಗೆ ಗ್ರಾಪಂ ವ್ಯಾಪ್ತಿಯಲ್ಲಿ ಸ್ವಲ್ಪ ಜಾಗವನ್ನು ನೀಡಬೇಕು ಎಂದು ಹೇಳುವ ಮೂಲಕ ಸಮಸ್ಯೆ ಪರಿಹಾರಕ್ಕೆ ಮುಂದಾದಾಗ ಅಪರ ಜಿಲ್ಲಾಧಿಕಾರಿಗಳು ಶಹಬಾಸ್ ಹೇಳಿ, ಜಾಗದ ವ್ಯವಸ್ಥೆ ಕುರಿತು ಶೀಘ್ರ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಸಂಜೀವ ಮಠಂದೂರು ಫಲಾನುಭವಿಗಳಿಗೆ ಇಂದಿರಾಗಾಂಧಿ ವೃದ್ಧಾಪ್ಯ ವೇತನ, ನಿರ್ಗತಿಕ ವಿಧವಾ ವೇತನ, ಸಂಧ್ಯಾ ಸುರಕ್ಷಾ ಆದೇಶ ಹಾಗೂ 94ಸಿ ಹಕ್ಕು ಪತ್ರಗಳನ್ನು ವಿತರಿಸಿ ಮಾತನಾಡಿ, ಸರಕಾರದ ಯೋಜನೆಗಳನ್ನು ಮನೆ ಬಾಗಿಲಿಗೆ ಮುಟ್ಟಿಸುವ ನಿಟ್ಟಿನಲ್ಲಿ ಸರಕಾರ ಅಧಿಕಾರಿಗಳ ಗ್ರಾಪ ವಾಸ್ತವ್ಯವನ್ನು ಹಮ್ಮಿಕೊಂಡಿದೆ. ಸರಕಾರದ ಯೋಜನೆ ಫಲಾನುಭವಿಗಳ ಮನೆಬಾಗಿಲಿಗೆ ತಲುಪಿ ಸ್ವಾವಲಂಬಿ, ಸ್ವಾಭಿಮಾನಿ ಜೀವನ ಮಾಡಬೇಕು ಎಂಬ ದೃಷ್ಟಿಯಿಂದ ಇಂತಹಾ ಕಾರ್ಯಕ್ರಮಗಳು ನಡೆಯುತ್ತಿದೆ. ಒಟ್ಟಾರೆಯಾಗಿ ಪ್ರತಿಯೊಂದು ಗ್ರಾಪಂಗಳು ಅಭಿವೃದ್ಧಿ ದೃಷ್ಟಿಯಿಂದ ಮೋಡೆಲ್ ಪಂಚಾಯಿತಿ ಆಗಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ಪುತ್ತೂರು ತಹಸೀಲ್ದಾರ್ ನಿಸರ್ಗಪ್ರಿಯ,ಉಪತಹಸೀಲ್ದಾರ್ ಸುಲೋಚನಾ, ಗ್ರೇಡ್2 ತಹಸೀಲ್ದಾರ್ ದಯಾನಂದ, ಆಹಾರ ಇಲಾಖೆಯ ಉಪನಿರ್ದೇಶಕ ಮಾಣಿಕ್ಯ, ಕೃಷಿ ಇಲಾಖೆಯ ಉಪನಿರ್ದೇಶಕ ಶಿವಶಂಕರ, ಸೀತಾ, ಭೂಮಾಪನ ಇಲಾಖೆ ಉಪನಿರ್ದೇಶಕ ನಿರಂಜನ್, ನಗರಸಭೆ ಪೌರಾಯುಕ್ತ ಮಧು ಎಸ್.ಮನೋಹರ್, ಅರಣ್ಯ ಇಲಾಖೆ ಸಹಾಯಕ ಸಂರಕ್ಷಣಾಧಿಕಾರಿ ವಿ.ಪಿ.ಕಾರ್ಯಪ್ಪ, ಕಬಕ ಗ್ರಾಪಂ ಉಪಾಧ್ಯಕ್ಷ ರುಕ್ಮಯ್ಯ ಗೌಡ, ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.