ಪುತ್ತೂರು: ಅ.23ರಂದು ದೀಪಾವಳಿ ಸಂಭ್ರಮಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ

ಪುತ್ತೂರು: ಬಿಜೆಪಿ ಪಕ್ಷವನ್ನು ರಾಷ್ಟ್ರ ಮಟ್ಟದಲ್ಲಿ ಬೆಳೆಸಿ, ರಾಜ್ಯ ಮತ್ತು ರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರಲು ಕಾರಣಕರ್ತರಾದ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿರಿಯ ಬಿಜೆಪಿ ಕಾರ್ಯಕರ್ತರನ್ನು ಒಟ್ಟು ಸೇರಿಸಿ ಬೆಳಕಿನ ಹಬ್ಬದ ಸಂಭ್ರಮಾಚರಣೆ ಹಾಗೂ ಎಲ್ಲರಿಗೂ ಗೌರವಾರ್ಪಣೆ ಮಾಡುವ ಕಾರ್ಯಕ್ರಮ ಅ.23ರಂದು ಪುತ್ತೂರಿನ ಕೊಟೇಚಾ ಸಭಾಭವನದಲ್ಲಿ ನಡೆಯಲಿದೆ ಎಂದು ಶಾಸಕ ಸಂಜೀವ ಮಠಂದೂರು ಅವರು ತಿಳಿಸಿದರು.

ಶುಕ್ರವಾರ ಪುತ್ತೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಬಿಜೆಪಿ ಗ್ರಾಮಾಂತರ ಮಂಡಲ ಮತ್ತು ನಗರ ಮಂಡಲದ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯುವುದು. ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ 221 ಬೂತ್ಗಳಲ್ಲಿರುವ, ಕಳೆದ 50-60 ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ಹಿರಿಯ ಕಾರ್ಯಕರ್ತರನ್ನು ಗುರುತಿಸಿ ಕಾರ್ಯಕ್ರಮಕ್ಕೆ ಕರೆದುಕೊಂಡು ಬಂದು ಶಾಲು ಹೊದಿಸಿ, ಹಾರ ಹಾಕಿ, ಸ್ಮರಣಿಕೆ ಮತ್ತು ಸಿಹಿತಿಂಡಿ ಪೆÇಟ್ಟಣ ನೀಡಿ ಗೌರವಿಸಲಾಗುವುದು ಎಂದರು.

ಪತ್ರಿಕಾಗೋಷ್ಟಿಯಲ್ಲಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ರಾಧಾಕೃಷ್ಣ ರೈ ಸಾಜ,ನಗರಸಭೆಯ ಅಧ್ಯಕ್ಷ ಕೆ.ಜೀವಂಧರ್ ಜೈನ್, ಬಿಜೆಪಿ ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ್ ರಾವ್ ಮತ್ತಿತರರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.