ನವಂಬರ್ 18 ರಾಜ್ಯದಾದ್ಯಂತ ಸಮುದಾಯ ಆರೋಗ್ಯ ನೌಕರರ ಪ್ರತಿಭಟನೆ

ಪುತ್ತೂರು: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಮುದಾಯ ಆರೋಗ್ಯ ನೌಕರರ ಸಂಘದ ನೇತೃತ್ವದಲ್ಲಿ ನವೆಂಬರ್ 18 ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಯಲಿದೆ ಎಂದು ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ನೌಕರರ ಸಂಘದ ದಕ್ಷಿಣಕನ್ನಡ ಜಿಲ್ಲಾಧ್ಯಕ್ಷೆ ಜ್ಯೋತಿ. ಜೆ.ಆರ್ ಹೇಳಿದರು.

ಪುತ್ತೂರು ಪ್ರೆಸ್ ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಭಾರತ ಸರಕಾರದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಕರ್ನಾಟಕದ ಎಲ್ಲಾ ಆರೋಗ್ಯ ಉಪಕೇಂದ್ರಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಅಧಿಕಾರಿಗಳ ಹುದ್ದೆಯನ್ನು ಖಾಯಂಗೊಳಿಸಬೇಕು, ಭಾರತ ಸರಕಾರ ನೀಡುವ ಪ್ರೋತ್ಸಾಹಧನವನ್ನು ರಾಜ್ಯದಲ್ಲಿ ಕಡಿತಗೊಳಿಸಿ ನೀಡಲಾಗುತ್ತಿದೆ. ಕೇಂದ್ರ ಸರಕಾರ ನೀಡುವ 15 ಸಾವಿರ ಪೆÇ್ರೀತ್ಸಾಹ ಧನವನ್ನು ಪೂರ್ತಿಯಾಗಿ ನೀಡಬೇಕು. ಸಮುದಾಯ ಆರೋಗ್ಯ ಅಧಿಕಾರಿಗಳನ್ನು ಇತರ ಕಾರ್ಯಗಳಿಗೆ ನಿಯುಕ್ತಿಗೊಳಿಸುವುದನ್ನು ನಿಲ್ಲಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಸರಕಾರಕ್ಕೆ ಪ್ರತಿಭಟನೆ ಮೂಲಕ ಸಲ್ಲಿಸಲಾಗುವುದು ಎಂದರು.

ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿಲ್ ಹಳ್ಳಿ, ತಾಲ್ಲೂಕು ಅಧ್ಯಕ್ಷ ಗುರುರಾಜ್, ಮಾಧ್ಯಮ ಕಾರ್ಯದರ್ಶಿ ಮಲ್ಲಿಕಾರ್ಜುನ ಉಪಸ್ಥಿತರಿದ್ದರು.

Related Posts

Leave a Reply

Your email address will not be published.