ಡಿ.25ರಂದು ಯುವ ಒಕ್ಕಲಿಗ ಗೌಡ ಸೇವಾ ಸಂಘದ ಯುವ ಕ್ರೀಡಾ ಸಂಭ್ರಮ

ಪುತ್ತೂರು : ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘ ಮತ್ತು ಯುವ ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ವಲಯದ ಆತಿಥ್ಯದಲ್ಲಿ ಒಕ್ಕಲಿಗ ಗೌಡ ಸಮುದಾಯದ ಪುತ್ತೂರು ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ ಕಾರ್ಯಕ್ರಮ ಡಿ.25 ರಂದು ಬೆಳಗ್ಗಿನಿಂದ ಸಂಜೆ ತನಕ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕ್ರೀಡಾ ಸಮಿತಿಯ ಸಂಚಾಲಕ ಎ.ವಿ.ನಾರಾಯಣ ಸುದ್ದಿಗೋಷ್ಠಿಯಲಿ ತಿಳಿಸಿದರು.
ಬೆಳಿಗ್ಗೆ 9 ಗಂಟೆಗೆ ಕ್ರೀಡಾಕೂಟವನ್ನು ಊರ ಗೌಡರಾದ ಕೊಡಿಪ್ಪಾಡಿಯ ಪಕ್ರು ಗೌಡ ಅವರು ಉದ್ಘಾಟಿಸಲಿದ್ದಾರೆ. ಬಳಿಕ ಕ್ರೀಡಾ ಸ್ಪರ್ಧೆಗಳು ಆರಂಭಗೊಳ್ಳಲಿದೆ ಎಂದರು. ಪೂರ್ವಾಹ್ನ 11 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ| ಧರ್ಮಪಾಲನಾಥ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ.
ಶಾಸಕ ಸಂಜೀವ ಮಠಂದೂರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಕೆಯ್ಯೂರು ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ.ಜಿಲ್ಲಾ ಗೌಡ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ ಅವರು ಧ್ವಜಾರೋಹಣ ಮಾಡಲಿದ್ದಾರೆ. ರಾಜ್ಯ ಸಮಾಜ ಕಲ್ಯಾಣ ನಿಗಮದ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಗೌಡ ಚಿಲ್ತಡ್ಕ, ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಸಲಹಾ ಸಮಿತಿಯ ಅಧ್ಯಕ್ಷ ಮೋಹನ ಗೌಡ ಇಡ್ಯಡ್ಕ ಮತ್ತಿತರರು ಅತಿಥಿಗಳಾಗಿ ಭಾಗವಹಿಸುವರು ಎಂದು ಅವರು ತಿಳಿಸಿದರು.
ಒಕ್ಕಲಿಗ ಗೌಡ ಸಂಘದ ಪುತ್ತೂರು ನಗರ ಸಮಿತಿಯ ಅಧ್ಯಕ್ಷ ಅಮರನಾಥ ಗೌಡ ಬಪ್ಪಳಿಗೆ, ನಗರ ವಲಯಾಧ್ಯಕ್ಷ ಪ್ರಶಾಂತ್ ಕೆಮ್ಮಾಯಿ, ಕ್ರೀಡಾ ಸಂಯೋಜಕ ಮಾಧವ ಗೌಡ ಪೆರಿಯತ್ತೋಡಿ, ವಲಯ ಕಾರ್ಯದರ್ಶಿ ಆನಂದ ಗೌಡ ತೆಂಕಿಲ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
