ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಪ್ರಾಮಣಿಕ ಪ್ರಯತ್ನ ಮಾಡ್ತೇವೆ : ಜಿ.ಎ ಶಂಸುದ್ದೀನ್ ಅಜ್ಜಿನಡ್ಕ
ಪುತ್ತೂರು:- ಕರ್ನಾಟಕ ರಾಜ್ಯದಲ್ಲಿ ಮುಂಬರಲಿರುವ ಸಾರ್ವತ್ರಿಕ ವಿಧಾನ ಸಭಾ ಚುನಾವಣೆಯಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾರೇ ಆದರೂ ನಾವೆಲ್ಲರೂ ಪಕ್ಷ ಮುಖ್ಯ ಎನ್ನುವ ನಿಟ್ಟಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಪ್ರಾಮಾಣಿಕವಾಗಿ ಗೆಲ್ಲಿಸಲು ಪ್ರಯತ್ನ ಮಾಡ್ತೇವೆ ಮತ್ತು ಸಂಘಟಿತರಾಗಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ಪಣತೊಟ್ಟಿದ್ದೇವೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಮಾಜಿ ಮಾಧ್ಯಮ ವಕ್ತಾರ ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ಅವರು ತಿಳಿಸಿದ್ದಾರೆ.
ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು ಇದುವೇ ನಮ್ಮ ಮುಖ್ಯ ಉದ್ದೇಶ ಮತ್ತು ಧ್ಯೇಯ ವಾಕ್ಯವಾಗಿದೆ ಈ ನಿಟ್ಟಿನಲ್ಲಿ ಪುತ್ತೂರಿನಲ್ಲಿ ಕಾಂಗ್ರೆಸ್ ಪಕ್ಷವೇ ನಮಿಗೆ ಮುಖ್ಯವಾಗಿದೆ ಈ ನಿಟ್ಟಿನಲ್ಲಿ ಅಭ್ಯರ್ಥಿ ಯಾರೇ ಆದರೂ ನಾವೆಲ್ಲರೂ ನಮ್ಮ ನಮ್ಮ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವಿಗಾಗಿ ಅತ್ಯಂತ ಪ್ರಾಮಾಣಿಕವಾಗಿ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಪ್ರಯತ್ನ ಮಾಡ್ತೇವೆ ಎಂದರು
ದೇಶದಲ್ಲಿ ಮತ್ತು ರಾಜ್ಯದಲ್ಲಿ ಪ್ರಸಕ್ತ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಅಧಿಕಾರಕ್ಕೆ ಬರಬೇಕಾಗಿದೆ ಈ ನಿಟ್ಟಿನಲ್ಲಿ ಪಕ್ಷ ಮುಖ್ಯ ಎಂಬ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ನಾವೆಲ್ಲರೂ ಶಕ್ತಿಮೀರಿ ದುಡಿಯಬೇಕಾದ ಅವಶ್ಯಕತೆ ಅನಿವಾರ್ಯ ಇದೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಮಾಜಿ ಮಾಧ್ಯಮ ವಕ್ತಾರ ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ಅವರು ಪತ್ರಿಕಾ ಹೇಳಿಕೆಯ ಮೂಲಕ ಮಾಹಿತಿಯನ್ನು ತಿಳಿಸಿರುತ್ತಾ