ಫೆ.10ರಿಂದ 12ವರೆಗೆ ಪುತ್ತೂರಿನಲ್ಲಿ ಬೃಹತ್ ಕೃಷಿಯಂತ್ರ ಮೇಳ

ಪುತ್ತೂರು: ಪ್ರತಿಷ್ಟಿತ ಕ್ಯಾಂಪ್ಕೋ ಸಂಸ್ಥೆ, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ, ಇದರ ಸಂಯುಕ್ತ ಆಶ್ರಯದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆವರಣದಲ್ಲಿ ಫೆಬ್ರವರಿ 10 ರಿಂದ 12 ರ ತನಕ 3 ದಿನಗಳ ಕಾಲ ನಡೆಯಲಿರುವ 5 ನೇ ಬೃಹತ್ ಕೃಷಿಯಂತ್ರ ಮೇಳ-2023 ಮತ್ತು ಕನಸಿನ ಮನೆ ಪ್ರದರ್ಶನಕ್ಕೆ ಎಲ್ಲಾ ಸಿದ್ದತೆಗಳು ಮುಕ್ತಾಯದ ಹಂತದಲ್ಲಿವೆ ಎಂದು ಕ್ಯಾಂಪೆÇ್ಕೀ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಅವರು ಹೇಳಿದರು.

ಪುತ್ತೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಫೆ. 10 ರಂದು ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಸಂಜೀವ ಮಠಂದೂರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಸಹಕಾರದೊಂದಿಗೆ ನಿರ್ಮಿಸಲಾಗಿರುವ ಪಾರಂಪರಿಕ ಮಾದರಿ ಗ್ರಾಮದ ಉದ್ಘಾಟನೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಪಿ.ಸುಬ್ರಮಣ್ಯ ಯಡಪಡಿತ್ತಾಯ ಅವರು ನೆರವೇರಿಸುತ್ತಾರೆ.

ಯಂತ್ರಮೇಳದ ಸಂಯೋಜಕ ರವಿಕೃಷ್ಣ.ಡಿ.ಕಲ್ಲಾಜೆ ಅವರು ಮಾತನಾಡಿ, ಫೆ. 10ರಂದು ಅಪರಾಹ್ನ 3 ಗಂಟೆಯಿಂದ ವಿವೇಕಾನಂದ ವಿದ್ಯಾ ಸಂಸ್ಥೆಗಳ ಉಪನ್ಯಾಸಕರಿಂದ ಯಕ್ಷಗಾನ, ಸಂಜೆ 5ಗಂಟೆಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕು.ಇಶಾ ಸುಲೋಚನ ಇವರಿಂದ ನೃತ್ಯ ಹಾಗೂ ಸಂಜೆ 6 ರಿಂದ ವಿದುಷಿ ಶಾಲಿನಿ ಆತ್ಮಭೂಷಣ್ ಇವರಿಂದ ನೃತ್ಯ ವೈಭವ ಕಾರ್ಯಕ್ರಮ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕ ಎಚ್.ಎಮ್.ಕೃಷ್ಣಕುಮಾರ್, ನಿರ್ದೇಶಕರಾದ ಕೃಷ್ಣಪ್ರಸಾದ್ ಮಡ್ತಿಲ, ದಯಾನಂದ ಹೆಗ್ಡೆ, ರಾಘವೇಂದ್ರ ಭಟ್, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ಯಂತ್ರಮೇಳದ ಸಂಯೋಜಕ ರವಿಕೃಷ್ಣ.ಡಿ.ಕಲ್ಲಾಜೆ ಉಪಸ್ಥಿತರಿದ್ದರು.

Related Posts

Leave a Reply

Your email address will not be published.