ಪುತ್ತೂರು: ಡಾ. ಬಡೆಕ್ಕಿಲ ಶ್ರೀಧರ ಭಟ್‍ರ ಪುಸ್ತಕ ಲೋಕಾರ್ಪಣೆ ಮತ್ತು ನುಡಿ ನಮನ ಕಾರ್ಯಕ್ರಮ
ಪುತ್ತೂರು ತಾಲ್ಲೂಕು ಶಾಂತಿಗೋಡಿನ ನವಚೇತನ ಹಿರಿಯ ನಾಗರೀಕರ ಸಮುಚ್ಛಯದ ಸಹಯೋಗದಲ್ಲಿ ಬಹುಮುಖ ಪ್ರತಿಭೆಯ ದಿ. ಡಾ. ಬಡೆಕ್ಕಿಲ ಶ್ರೀಧರ ಭಟ್ ಅವರ ಪುಸ್ತಕದ ಲೋಕಾರ್ಪಣೆ ಮತ್ತು ನುಡಿ ನಮನ ಕಾರ್ಯಕ್ರಮವು ನವಚೇತನ ಹಿರಿಯ ನಾಗರೀಕರ ಸಮುಚ್ಛಯದಲ್ಲಿ ನಡೆಯಿತು.
ಪುಸ್ತಕ ಅನಾವರಣ ಮಾಡಿದ ಮುಂಬಯಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ. ವಸಂತ ಕುಮಾರ್ ತಾಳ್ತಜೆ ಮಾತನಾಡಿ, ಡಾ. ಬಡೆಕ್ಕಿಲ ಶ್ರೀಧರ್ ಭಟ್ ಅವರದ್ದು ವೃತ್ತಿಯಲ್ಲಿ ವಿಜ್ಞಾನ ಕ್ಷೇತ್ರವಾದರೂ ಪ್ರವೃತ್ತಿಯಲ್ಲಿ ಕಲಾವಿದನಾಗಿಯೂ ಗುರುತಿಸಿಕೊಂಡವರು. ಅಪಾರ ಸಾವಿತ್ಯ ಒಲವು ಹೊಂದಿದ್ದ ಅವರ ಬಂಧುಪ್ರೇಮ, ಭ್ರಾತೃತ್ವ, ಆಡಳಿತ ವೈಖರಿ ಸೇರಿದಂತೆ ವಿವಿಧ ಆಯಾಮಗಳ ಸಾಧನೆಯ ಲೇಖನಗಳು ಪುಸ್ತಕದಲ್ಲಿವೆ ಎಂದರು. ಈ ಪುಸ್ತಕ ಕೊಂಡು ಓದುವ, ಕೊಂಡಾಡುವ ಕೃತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ಎಚ್.ಜಿ., ಪುಸ್ತಕದ ಪ್ರಕಾಶಕರಾದ ಸುಶೀಲ ಭಟ್, ಕೃತಿ ಸಂಪಾದಕರಾಗಿರುವ ಭಟ್ ಬಯೋಟೆಕ್ ಇಂಡಿಯಾ ಪ್ರೈ. ಲಿಮಿಟೆಡ್ ಮತ್ತು ನವಚೇತನ ರಿಟೈರ್ಮೆಂಟ್ ಟೌಶ್ನಿಪ್‍ನ ಪ್ರಮೋಟರ್ ಡಾ. ಶಾಮ ಭಟ್, ದಿ. ಡಾ. ಬಡೆಕ್ಕಿಲ ಶ್ರೀಧರ್ ಭಟ್ ಅವರ ಪತ್ನಿ ಸಾವಿತ್ರಿ ಭಟ್, ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬೆಟ್ಟಂಪಾಡಿ ಸ. ಪ್ರ. ದ. ಕಾಲೇಜಿನ ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿ, ಅರುಣ್ ಕುಮಾರ್ ಪುತ್ತಿಲ ಮತ್ತಿತರರು ಉಪಸ್ಥಿತರಿದ್ದರು.