ಬಿ.ಕೆ ಸೇಸಪ್ಪ ಬೆದ್ರಕಾಡು ವಿರುದ್ಧ ಜಾಲತಾಣದಲ್ಲಿ ಅಪಪ್ರಚಾರ : ಕಾನೂನು ಹೋರಾಟ ಸಮರದ ಎಚ್ಚರಿಕೆ ನೀಡಿದ ದಸಂಸ
ಪುತ್ತೂರು; ದಲಿತ ಸಂಘಟನೆಯೊಂದರ ಮುಖಂಡರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸುವುದರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಜಿಲ್ಲಾ ದಲಿತ್ ಸೇವಾಸಮಿತಿ ಈ ಬಗ್ಗೆ ಕಾನೂನು ಸಮರ ನಡೆಸಲು ತೀರ್ಮಾನಿಸಿದ್ದು, ಕಾನೂನು ಹೋರಾಟಕ್ಕೆ ಬೆಲೆ ಸಿಗದಿದ್ದರೆ ಬೀದಿಗಿಳಿದು ಹೋರಾಟ ನಡೆಸುವ ಎಚ್ಚರಿಕೆ ನೀಡಿದೆ.
ಪುತ್ತೂರು ಪತ್ರಿಕಾಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಸಮಿತಿ ಕಾರ್ಯಾಧ್ಯಕ್ಷ ಚಂದ್ರಶೇಖರ್ ವಿಟ್ಲ ಮಾತನಾಡಿ, ನೆಲ್ಯಾಡಿ ಭಾಗದಲ್ಲಿ ಜಮೀನಿನ ವಿಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ದಲಿತ್ ಸೇವಾಸಮಿತಿಯ ಸ್ಥಾಪಕಾಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು ಹಣ ಪಡೆದುಕೊಂಡಿದ್ದಾರೆ ಎಂಬ ಅಪಪ್ರಚಾರ ನಡೆಸಲಾಗುತ್ತಿದೆ.
ಅಂತಹ ದಾಖಲೆಗಳು ಇದ್ದರೆ ನೇರವಾಗಿ ಪೊಲೀಸರಿಗೆ ದೂರು ನೀಡಬಹುದು ಎಂದ ಅವರು ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸುವ ಕೃತ್ಯವನ್ನು ತಕ್ಷಣ ನಿಲ್ಲಿಸಬೇಕು ಎಂದು ಹೇಳಿದರು. ಸುದ್ದಿಗೋಷ್ಟಿಯಲ್ಲಿ ದಲಿತ್ ಸೇವಾ ಸಮಿತಿ ಪದಾಧಿಕಾರಿಗಳಾದ ಸೋಮಪ್ಪ ನಾಯ್ಕ್ ಮಲ್ಯ, ದಯಾನಂದ ಬಲ್ನಾಡು, ಬಿ.ಕೆ.ಅಣ್ಣಪ್ಪ ಕಾರೆಕ್ಕಾಡು ಮತ್ತು ಯಾಮಿನಿ ಬೆಟ್ಟಂಪಾಡಿ ಉಪಸ್ಥಿತರಿದ್ದರು.