puttur : ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುವವರಿಗೆ ಗ್ರೌಂಡ್ ತರಬೇತಿ

ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುವಂತಹ ಉತ್ತಮ ನಿರ್ಣಯ ಕೈಗೊಂಡಿರುವುದು ಸಂತೋಷದ ವಿಚಾರವಾಗಿದ್ದು,ಇದಕ್ಕಿಂತಹ ಉತ್ತಮ ಬೇರೊಂದಿಲ್ಲ. ಹೀಗೆಂದು ಹೇಳಿದರು ನಿವೃತ್ತ ಏರ್ ವೇಸ್ ಮಾರ್ಷಲ್ ರಮೇಶ್ ಕಾರ್ಣಿಕ್.

ಪುತ್ತೂರಿನ ವಿದ್ಯಾಮಾತಾ ಅಕಾಡೆಮಿ ವತಿಯಿಂದ ಭಾನುವಾರ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಭಾರತೀಯ ಸೇನೆಗೆ ಸೇರುವ ಅಭ್ಯರ್ಥಿಗಳಿಗೆ ಗ್ರೌಂಡ್ ತರಬೇತಿ ಹಾಗೂ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತೀಯ ಸೇನೆಗೆ ಸೇರುವುದರಿಂದ ಅವರ ಜೀವನ ಸಾರ್ಥಕ ಆಗುವುದರ ಜತೆಗೆ ಉತ್ತಮ ಸೇವೆ ನೀಡುವ ಅವಕಾಶ ಸಿಗುತ್ತದೆ. ಜತೆಗೆ ದೈಹಿಕ, ಮಾನಸಿಕ ಬದಲಾವಣೆ ಆಗುತ್ತದೆ ಎಂದ ಅವರು, ಈ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುವ ಮನೋಭಾವ ಇಟ್ಟುಕೊಳ್ಳಿ ಎಂದು ಕಾರ್ಯಾಗಾರದಲ್ಲಿ ಪಾಲ್ಗೊಂಡ ಯುವಕ-ಯುವತಿಯರಿಗೆ ಕಿವಿಮಾತು ಹೇಳಿದರು.

ವಿದ್ಯಾಮಾತಾ ಅಕಾಡೆಮಿ ಸಂಚಾಲಕ ಭಾಗ್ಯೇಶ್ ರೈ ಪ್ರಾಸ್ತಾವಿಕವಾಗಿ ಮಾತನಾಡಿ, ಸೇನಾ ನೇಮಕಾತಿ ಆಯ್ಕೆಗೆ ಪ್ರಯತ್ನ ಪಡುವವರಿಗೆ ಅಥವಾ ಅಗ್ನಿಪಥ್ ಗೆ ಆಯ್ಕೆಯಾಗುವವರಿಗೆ ಮಾಹಿತಿ ಇರುವುದಿಲ್ಲ. ಈ ನಿಟ್ಟಿನಲ್ಲಿ ಈ ಬಾರಿ ಆಯ್ಕೆ ಪ್ರಕ್ರಿಯೆಯಲ್ಲಿ ಮೊದಲು ಪರೀಕ್ಷೆ ಬಳಿಕ ಗ್ರೌಂಡ್ ಆಯ್ಕೆ ಇರುತ್ತದೆ. ಈ ನಿಟ್ಟಿನಲ್ಲಿ ವಿದ್ಯಾಮಾತಾ ಅಕಾಡೆಮಿ ವತಿಯಿಂದ ಪ್ರಥಮ ಹಂತರ ಪೂರ್ವಭಾವಿ ತಯಾರಿ ಮಾಡಿದ್ದೇವೆ ಎಂದರು.

ಈ ಸಂದರ್ಭದಲ್ಲಿ ನಿವೃತ್ತ ಸೈನಿಕ, ವಿದ್ಯಾಮಾತಾ ಅಕಾಡೆಮಿ ಗೌರವ ಸಲಹೆಗಾರ ಗೋಪಾಲಕೃಷ್ಣ ಕಾಂಚೋಡು ಅವರನ್ನು ಶಾಲು ಹೊದಿಸಿ, ಫಲಪುಷ್ಪ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಗ್ರೌಂಡ್ ತರಬೇತಿಯಲ್ಲಿ ಫೈನಲ್ ಹಂತಕ್ಕೆ ತಲುಪಿದವರಿಗೆ ಸ್ಮರಣಿಕೆ ನೀಡಲಾಯಿತು.

ವೇದಿಕೆಯಲ್ಲಿ ನಿವೃತ್ತ ಸೈನಿಕ ವೆಂಕಪ್ಪ ಗೌಡ, ಯುವಜನ ಸೇವಾ ಕ್ರೀಡಾ ಇಲಾಖೆ ಮೇಲ್ಷಿಚಾರಕ ಶ್ರೀಕಾಂತ್ ಬಿರಾವು, ದೈಹಿಕ ಶಿಕ್ಷಣ ಶಿಕ್ಷಕ ಮೋನಪ್ಪ, ನಿವೃತ್ತ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ದಯಾನಂದ ರೈ ಕೋರ್ಮಂಡ, ತರಬೇತುದಾರರಾದ ವಿಜೇತ್, ಪೂರ್ಣಿಮಾ ಉಪಸ್ಥಿತರಿದ್ದರು.

Related Posts

Leave a Reply

Your email address will not be published.