ಪುತ್ತೂರಿನಲ್ಲಿ ಬಾಬು ಜಗಜ್ಜೀವನ್‍ರಾಮ್ ಜನ್ಮ ದಿನಾಚರಣೆ
ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬುಧವಾರ ಪುತ್ತೂರಿನ ಮಿನಿ ವಿಧಾನ ಸೌಧದಲ್ಲಿರುವ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜ್ಜೀವನ್‍ರಾಮ್ ಅವರ 116ನೇ ಜನ್ಮ ದಿನಾಚರಣೆಯನ್ನು ನಡೆಸಲಾಯಿತು.
ಪುತ್ತೂರಿನ ಕ್ಷೇತ್ರ ಶಿಕ್ಷಣಾಧಿಕಾರಿ ಬಾಬು ಜಗಜ್ಜೀವನ್‍ರಾಮ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿ ಬಾಬು ಜಗಜ್ಜೀವನ್‍ರಾಮ್ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ದಿವ್ಯ ಚೇತನರಾಗಿದ್ದು, ದೇಶದ ಉನ್ನತ ಸಚಿವರಾಗಿ, ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದವರು. ದಲಿತರಿಗೆ ಮತ್ತು ಹಿಂದುಳಿದ ವರ್ಗಗಳಿಗೆ ಸಮಾನ ಅವಕಾಶ ಸಿಗಬೇಕು ಎಂಬುದು ಅವರ ನಿಲುವಾಗಿತ್ತು. ಅವರ ಏಳಿಗೆಗಾಗಿ ಸಾಕಷ್ಟು ದುಡಿದಿದ್ದಾರೆ. ಅವರ ತತ್ವ ಮತ್ತು ಆದರ್ಶಗಳನ್ನು ನಾವು ಪಾಲಿಸಿದಲ್ಲಿ ಸದೃಡ ಮತ್ತು ಸಂಪದ್ಬರಿತ ದೇಶ ನಮ್ಮದಾಗಲಿದೆ ಎಂದರು.
ವೇದಿಕೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ನಗರಸಭೆಯ ಪೌರಾಯುಕ್ತ ಮಧು ಎಸ್ ಮನೋಹರ್,
ತಾಲೂಕು ಪಂಚಾಯತ್ ಯೋಜನಾಧಿಕಾರಿ ಸುಕನ್ಯಾ,ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಕೃಷ್ಣ ಬಿ., ಉಪತಹಸೀಲ್ದಾರ್ ಸುಲೋಚನಾ ಉಪಸ್ಥಿತರಿದ್ದರು.