HomeFresh Newsಬ್ಯಾನರಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣ : ಪೊಲೀಸರ ಥಳಿತ, ವಿಡೀಯೋ ವೈರಲ್

ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣ : ಪೊಲೀಸರ ಥಳಿತ, ವಿಡೀಯೋ ವೈರಲ್

ಪುತ್ತೂರು: ಪುತ್ತೂರು ಅರಣ್ಯ ಇಲಾಖೆಯ ಆವರಣ ಗೋಡೆಯ ಬಳಿ ಬಿಜೆಪಿ ಮುಖಂಡರಾದ ಡಿ. ವಿ. ಸದಾನಂದ ಗೌಡ ಹಾಗೂ ನಳಿನ್ ಕುಮಾರ್ ಕಟೀಲ್ ಅವರ ಭಾವ ಚಿತ್ರವುಳ್ಳ ಶ್ರದ್ಧಾಂಜಲಿ ಬ್ಯಾನರ್ ಹಾಕಿ ಅದಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ವಶಕ್ಕೆ ಪಡೆದುಕೊಂಡಿದ್ದ ಆರೋಪಿಗಳ ಮೇಲೆ ಪೊಲೀಸ್ ರು ಹಿಗ್ಗಾಮುಗ್ಗಾ ಥಳಿಸಿ ಗಾಯಗೊಳಿಸಿರುವ ವೀಡೀಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳ ಮೇಲೆ ಪೋಲೀಸರು ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಬಿಜಿಪಿ ಸೋಲಿಗೆ ಕಾರಣರಾದ ನಾಯಕರಿಗೆ ಶ್ರದ್ಧಾಂಜಲಿ ಎಂದು ಬರೆದು ಹಾಕಲಾಗಿದ್ದ ಬ್ಯಾನರಿಗೆ ನಂತರ ಚಪ್ಪಲಿ ಹಾರ ಹಾಕಲಾಗಿತ್ತು. ಈ ಬ್ಯಾನರ್ ಅಳವಡಿಕೆಯ ವಿರುದ್ದ ಪುತ್ತೂರಿನಲ್ಲಿ ಬಿಜೆಪಿಯು ಪ್ರತಿಭಟನೆಯನ್ನು ನಡೆಸಿತ್ತು.

ಪ್ರಕರಣಕ್ಕೆ ಸಂಬಂಧಿಸಿ ನರಿಮೊಗರು ಗ್ರಾಮದ ನಿವಾಸಿಗಳಾದ ವಿಶ್ವನಾಥ್ ಮತ್ತು ಮಾಧವ ಎಂಬವರನ್ನು ಪ್ರಾರಂಭದಲ್ಲಿ ವಶಕ್ಕೆ ಪಡೆದುಕೊಂಡ ಪೊಲೀಸ್ ರು ನಂತರ ನರಿಮೊಗರು ನಿವಾಸಿಗಳಾದ ಅಭಿ ಯಾನೆ ಅವಿನಾಶ್, ಶಿವರಾಮ್, ಚೈತ್ರೇಶ್, ಈಶ್ವರ್, ನಿಶಾಂತ್, ದೀಕ್ಷಿತ್, ಗುರುಪ್ರಸಾದ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು.ಇದೀಗ ವಿಚಾರಣೆಯ ನೆಪದಲ್ಲಿ ಪೊಲೀಸ್ರು ವಶಕ್ಕೆ ಪಡೆದವರ ಮೇಲೆ ಹಿಗ್ಗಾಮುಗ್ಗಾ ತಳಿಸಿ ಗಾಯಗೊಳಿಸಿದ್ದಾರೆ ಎಂಬ ಆರೋಪ ಕೇಳಿ ಬರತೊಡಗಿದ್ದು ಪೋಲೀಸರ ಥಳಿತದಿಂದ ಗಾಯಗೊಂಡ ಯುವಕರ ರಕ್ತಸಿಕ್ತ ಚಿತ್ರಗಳಿರುವ ವಿಡಿಯೋ ತುಣುಕು ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದೆ. ಪೋಲೀಸ್ ದೌರ್ಜನ್ಯದ ವಿರುದ್ಧ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments