ಪುತ್ತೂರು: ಬ್ಯಾನರ್ ಪ್ರಕರಣ – ಪಿಎಸ್‍ಐ, ಪಿಸಿ ಅಮಾನತು, ಡಿವೈಎಸ್‍ಪಿ ವಿರುದ್ಧ ಶಿಸ್ತು

ಪುತ್ತೂರು: ಬ್ಯಾನರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಒಳಗಾದ ಯುವಕರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿದ್ದು, ದೌರ್ಜನ್ಯಕ್ಕೊಳಗಾದ ಯುವಕ ಅವಿನಾಶ್ ತಂದೆ ವೇಣುನಾಥ ನರಿಮೊಗರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪಿಎಸ್‍ಐ, ಪಿಸಿಯನ್ನು ಅಮಾನತುಗೊಳಿಸಿದ್ದಾರೆ.
ಪುತ್ತೂರು ಡಿವೈಎಸ್‍ಪಿ ಪುತ್ತೂರು ಗ್ರಾಮಾಂತರ ಠಾಣೆ ಪಿಎಸ್‍ಐ, ಪುತ್ತೂರು ಗ್ರಾಮಾಂತರ ಠಾಣೆಯ ಪಿಸಿ ಹರ್ಷಿತ್ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಅಡಿ ಟಿo.39/23 u/s 323, 324, 506 ಡಿ/ತಿ 34IPಅ ಸೆಕ್ಷನ್ ಪ್ರಕಾರ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆಯನ್ನು ಬಂಟ್ವಾಳ ಡಿವೈಎಸ್ಪಿ ಗೆ ವಹಿಸಲಾಗಿದೆ .ಈ ನಡುವೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ವಿಚಾರಣೆ ವರದಿ ಆಧಾರದ ಮೇಲೆ ಪುತ್ತೂರು ಗ್ರಾಮಾಂತರ ಠಾಣೆ ಪಿಎಸ್‍ಐ ಹಾಗೂ ಪಿಸಿ ಹರ್ಷಿತ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಪುತ್ತೂರು ಡಿವೈಎಸ್ಪಿ ವಿರುದ್ಧ ಸೂಕ್ತ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲು ವರದಿಯನ್ನು ಮೇಲಾಧಿಕಾರಿಗಳಿಗೆ ಸಲ್ಲಿಸಲಾಗಿದೆ.
