ಡಿವಿಎಸ್, ನಳಿನ್ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಬ್ಯಾನರ್ ಅಳವಡಿಕೆ ,ಪುತ್ತೂರು ಠಾಣೆಯಲ್ಲಿ ದೂರು
![](http://v4news.com/wp-content/uploads/2023/05/vlcsnap-2023-05-15-15h18m05s982.png)
ಪುತ್ತೂರು: ಬಿಜೆಪಿ ನಾಯಕರಿಬ್ಬರಾದ, ರಾಜ್ಯ ಬಿಜೆಪಿ ಅಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರದ ಮಾಜಿ ಸಚಿವ ಬೆಂಗಳೂರು ಉತ್ತರದ ಹಾಲಿ ಸಂಸದ ಡಿ ವಿ ಸದಾನಂದ ಗೌಡ ಅವರಿಗೆ ಶ್ರದ್ಧಾಂಜಲಿ ಕೋರಿ ಪುತ್ತೂರು ಬಸ್ ನಿಲ್ದಾಣದ ಬಳಿ ಬ್ಯಾನರ್ ಅಳವಡಿಸಿರುವುದನ್ನು ವಿರೋಧಿಸಿ, ಕೃತ್ಯ ಎಸಗಿದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಪುತ್ತೂರು ಬಿಜೆಪಿಯಿಂದ ಪುತ್ತೂರು ನಗರ ಪೆÇಲೀಸ್ ಠಾಣೆಗೆ ದೂರು ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್ ಸಹಿತ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.
![](http://v4news.com/wp-content/uploads/2023/05/Haven-Rose-690x1024.jpg)