ಬಿಜೆಪಿಗೆ ಹೀನಾಯ ಸೋಲು : ನಳಿನ್, ಡಿವಿಎಸ್ ಶ್ರದ್ಧಾಂಜಲಿ ಬ್ಯಾನರಿಗೆ ಚಪ್ಪಲಿ ಹಾರ

ಪುತ್ತೂರು: ನಳಿನ್ ಕುಮಾರ್ ಕಟೀಲ್ ಹಾಗೂ ಡಿ.ವಿ. ಸದಾನಂದ ಗೌಡ ಅವರೇ ಬಿಜೆಪಿ ಸೋಲಿಗೆ ಕಾರಣ ಎಂಬ ಒಕ್ಕಣೆಯ ಬ್ಯಾನರ್ ಅಳವಡಿಸಿ ಅದಕ್ಕೆ ಚಪ್ಪಲಿ ಹಾರ ಹಾಕಲಾಗಿದೆ.
ಪುತ್ತೂರು ಸರ್ಕಾರಿ ಬಸ್ ನಿಲ್ದಾಣ ಮುಂಭಾಗ ಈ ಬ್ಯಾನರನ್ನು ಅಳವಡಿಸಿದ್ದು, ತವರು ಕ್ಷೇತ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂಗೆ ಸೋಲಿನ ಬಿಸಿ ತಟ್ಟುವಂತೆ ಮಾಡಲಾಗಿದೆ. ಭಾವಪೂರ್ಣ ಶ್ರದ್ಧಾಂಜಲಿ ಎಂದು ಬ್ಯಾನರ್ ಹಾಕಿ, ಅದರಲ್ಲಿ ಬಿಜೆಪಿ ಸೋಲಿಗೆ ನೀವೇ ಕಾರಣ ಎಂಬ ಬರಹವನ್ನು ಬರೆಯಲಾಗಿದೆ. ಬ್ಯಾನರಿನ ಎರಡು ಬದಿಗಳಲ್ಲಿ ಡಿ.ವಿ. ಸದಾನಂದ ಗೌಡ ನಳಿನ್ ಕುಮಾರ್ ಕಟೀಲ್ ಅವರ ಫೆÇಟೋಗಳನ್ನು ಹಾಕಲಾಗಿದೆ. ಕೆಳಗಡೆ ನೊಂದ ಹಿಂದೂ ಕಾರ್ಯಕರ್ತರು ಎಂದು ಬರೆಯಲಾಗಿದೆ. ನಂತರ ಇದಕ್ಕೆ ಚಪ್ಪಲಿ ಹಾರ ಹಾಕಲಾಗಿದೆ.

Related Posts

Leave a Reply

Your email address will not be published.