ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ನಾಮಪತ್ರ ಸಲ್ಲಿಕೆ
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಆಶಾ ತಿಮ್ಮಪ್ಪ ಇಂದು ನಾಮಪತ್ರ ಸಲ್ಲಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನಾಮಪತ್ರ ಸಲ್ಲಿಸುವ ವೇಳೆ ಉಪಸ್ಥಿತರಿದ್ದು, ಅಭ್ಯರ್ಥಿಗೆ ಶುಭ ಹಾರೈಸಿದರು.
ನಾಮಪತ್ರ ಸಲ್ಲಿಸುವುದಕ್ಕೆ ಮೊದಲು ಮಹಾಲಿಂಗೇಶ್ವರ ದೇವಸ್ಥಾನದಿಂದ ಹೊರಟ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದ್ದರು. ಮೆರವಣಿಗೆಯಲ್ಲಿ ಬಿಜೆಪಿಯ ಸ್ಟಾರ್ ಪ್ರಚಾರಕರಾದ ನಟಿ ಶೃತಿ, ಬಿಜೆಪಿ ಯುವಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವೀ ಸೂರ್ಯ ಭಾಗವಹಿಸುವ ಮೂಲಕ ಕಾರ್ಯಕರ್ತರಿಗೆ ಹುರುಪು ತುಂಬಿದರು.
ಬಳಿಕ ಕಿಲ್ಲೆ ಮೈದಾನದಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ,ಸಂಸದ ತೇಜಸ್ವೀ ಸೂರ್ಯ, ಪುತ್ತೂರಿನ ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಬಿಜೆಪಿಗೆ ಪಾಠ ಕಲಿಸುವ ಅಹಂಕಾರದ ಮಾತನ್ನಾಡಿದ್ದಾರೆ.
ಅವರಿಗೆ ಮೇ 13ರಂದು ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಮತದಾರರು ತಕ್ಕ ಉತ್ತರ ನೀಡಬೇಕೆಂದು ಮನವಿ ಮಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ನಟಿ ಶೃತಿ ಬಿಜೆಪಿ ಮಹಿಳೆಯರಿಗೆ ಹೆಚ್ಚಿನ ಬಲವನ್ನು ತುಂಬುವ ಕೆಲಸ ಮಾಡಿದೆ. ಮಹಿಳೆಯರಿಗೆ ಗೌರವ ಮತ್ತು ಸ್ಥಾನಮಾನ ನೀಡಿದ ಪಕ್ಷವನ್ನು ಮಹಿಳೆಯರು ಬೆಂಬಲಿಸಬೇಕೆಂದು ಅವರು ಆಗ್ರಹಿಸಿದರು.